ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – ರಾಜ್ಯ ಮಹಿಳಾ ಕಾಂಗ್ರೆಸ್ ಮಾಜಿ ಅಧ್ಯಕ್ಷೆ, ಬೆಳಗಾವಿ ಗ್ರಾಮೀಣ ವಿಧಾನಸಭಾ ಕ್ಷೇತ್ರದ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಶನಿವಾರ ಜನರೊಂದಿಗೆ ನೇರ ಸಂವಾದ ನಡೆಸಲಿದ್ದಾರೆ.
ಶನಿವಾರ (ಮೇ 2) ಸಂಜೆ 6 ಗಂಟೆಯಿಂದ ಫೇಸ್ ಬುಕ್ ಲೈವ್ ನಲ್ಲಿ ಬರಲಿರುವ ಲಕ್ಷ್ಮಿ ಹೆಬ್ಬಾಳಕರ್, ಕೋವಿಡ್ -19 ಕುರಿತು ಜನರ ಜೊತೆ ಸಂಭಾಷಣೆ ನಡೆಸಲಿದ್ದಾರೆ. ಜೊತೆಗೆ ಜನರ ಸಂದೇಹ, ಸಮಸ್ಯೆಗಳಿಗೆ ಉತ್ತರಿಸಲಿದ್ದಾರೆ.
ಕೊರೋನಾ ರೋಗ ಆರಂಭವಾದಾಗಿನಿಂದಲೂ ಜನರ ಮಧ್ಯೆ ಇದ್ದು ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಲಕ್ಷ್ಮಿ ಹೆಬ್ಬಾಳಕರ್, ಜನರಿಗೆ ಇನ್ನಷ್ಟು ಹತ್ತಿರವಾಗಲು ಅವರ ಎಲ್ಲ ಸಂಶಯಗಳಿಗೆ ಪರಿಹಾರ ನೀಡಲಿದ್ದಾರೆ. ಜೊತೆಗೆ ಜನರ ಸಮಸ್ಯೆಗಳನ್ನು ಅರಿತುಕೊಂಡು ಅದನ್ನು ಪರಿಹರಿಸಲು ಜಿಲ್ಲಾಡಳಿತ ಮತ್ತು ಸರಕಾರದ ಗಮನಕ್ಕೆ ತರಲಿದ್ದಾರೆ.
ಸಾರ್ವಜನಿಕರು ಶನಿವಾರ ಸಂಜೆ 6 ಗಂಟೆಯಿಂದ ನೇರವಾಗಿ ಫೇಸ್ ಬುಕ್ ಲೈವ್ ನಲ್ಲಿ ಬರುವ ಮೂಲಕ ಲಕ್ಷ್ಮಿ ಹೆಬ್ಬಾಳಕರ್ ಜೊತೆ ಚರ್ಚಿಸಬಹುದು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ