Belagavi NewsBelgaum NewsElection NewsKannada NewsKarnataka NewsPolitics

ವಿವಿಧ ಸಮುದಾಯಗಳ ಮುಖಂಡರಿಂದ ಪ್ರಧಾನಿಗೆ ಸ್ವಾಗತ: ಶಾಸಕ ಅಭಯ್ ಪಾಟೀಲ್

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ವಿವಿಧ ಸಮುದಾಯದ ನಾಯಕರು, ಬಿಜೆಪಿ ಕಾರ್ಯಕರ್ತರು, ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸ್ವಾಗತ ಕೋರುತ್ತಾರೆ. ಇದು ಬಿಜೆಪಿ ಪಕ್ಷದಲ್ಲಿ ಮಾತ್ರ ಸಾಧ್ಯ ಎಂದು ಶಾಸಕ ಅಭಯ್ ಪಾಟೀಲ್ ಹೇಳಿದರು.

ಪ್ರಧಾನಿ ನರೇಂದ್ರ ಮೋದಿ ಅವರು ಬೆಳಗಾವಿಗೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ  ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ದೇಶಕ್ಕೆ ಸ್ವಾತಂತ್ರ ದೊರೆತು 75 ವರ್ಷ ಕಳೆದು ಹಲವು ಪ್ರಧಾನಮಂತ್ರಿಗಳು ಆಗಿಹೋಗಿದ್ದಾರೆ. ಅವರ ಸ್ವಾಗತವನ್ನು ಶಾಸಕರು, ಮಂತ್ರಿಗಳು, ಮುಖ್ಯಮಂತ್ರಿ, ಜನಪ್ರತಿನಿಧಿಗಳು ಮಾಡುತ್ತಿದ್ದರು. ಆದರೆ ಬೆಳಗಾವಿಯಲ್ಲಿ ವಿವಿಧ ಸಮುದಾಯದ ನಾಯಕರು , ಬೂತ್ ಮಟ್ಟದ ಕಾರ್ಯಕರ್ತರು ಮಾಡಲಿದ್ದಾರೆ. ಅತಿ ಸಾಮಾನ್ಯ ವ್ಯಕ್ತಿಗೂ ಪ್ರಧಾನಿಯವರ ಸಂಪರ್ಕ ಸಿಗಲಿ ಎಂಬ ಉದ್ದೇಶದಿಂದ ವಿನೂತನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಶಾಸಕ ಅಭಯ್ ಪಾಟೀಲ್ ಹೇಳಿದ್ದರು.

ವಿಧಾನ ಸಭೆ ಚುನಾವಣೆ ವೇಳೆ ಮಹಿಳಾ ಪೌರಕಾರ್ಮಿಕರು ಪ್ರಧಾನಿಯವರನ್ನು ಸ್ವಾಗತಿಸಿದ್ದರು.

Home add -Advt

Related Articles

Back to top button