Belagavi NewsBelgaum NewsKannada NewsKarnataka NewsPolitics
*ನಾಯಕತ್ವ ಬದಲಾವಣೆ ಪ್ರಕ್ರಿಯೆ ಆರಂಭವಾಗಿದೆ: ಶಾಸಕ ಬಾಬಾಸಾಹೇಬ್ ಪಾಟೀಲ್*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಒಂದೆಡೆ ಪದೆ ಪದೆ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ ಅವರು ಬ್ರೇಕ್‌ಫಾಸ್ಟ್ ಮೀಟಿಂಗ್ ಮಾಡಿ ಎಲ್ಲವೂ ಹೈಕಮಾಂಡ್ ತೀರ್ಮಾನಿಸಲಿದೆ ಎಂದು ಹೇಳುತ್ತಿದ್ದು, ಈ ಮಧ್ಯೆಯೇ ಡಿಕೆಶಿ ಆಪ್ತ ಶಾಸಕ ಬಾಬಾಸಾಹೇಬ್ ಪಾಟೀಲ್ ಹೇಳಿಕೆ ಚರ್ಚೆಗೆ ಕಾರಣವಾಗಿದೆ.
ನಾಯಕತ್ವದ ಬದಲಾವಣೆ ಬಗ್ಗೆ ಮಾತನಾಡಿದ ಚೆನ್ನಮ್ಮ ಕಿತ್ತೂರು ಶಾಸಕ ಬಾಬಾಸಾಹೇಬ್ ಪಾಟೀಲ್ ಅವರು, ಕಾಂಗ್ರೆಸ್ ಹೈಕಮಾಂಡ್‌ನಿಂದ ನಾಯಕತ್ವ ಬದಲಾವಣೆ ಪ್ರಕ್ರಿಯೆಗೆ ಚಾಲನೆ ಎಂದಿದ್ದಾರೆ.
ಪವರ್ ಶೇರಿಂಗ್ ಒಪ್ಪಂದ ಆಗಿದೆಯೋ? ಇಲ್ಲವೋ? ಎಂಬ ಗೊಂದಲ ನಿವಾರಿಸಿಕೊಳ್ಳಬೇಕಿತ್ತು. ಹಾಗಾಗಿ ಪವರ್ ಶೇರಿಂಗ್ ಗೊಂದಲ ನಿವಾರಿಸಿಕೊಳ್ಳಲು ನಾವು ದೆಹಲಿಗೆ ಹೋಗಿದ್ದೇವು. ನಮಗೆ ಕಾಂಗ್ರೆಸ್ ಹೈಕಮಾಂಡ್‌ನಿಂದ ಯಾವುದೇ ಉತ್ತರ ಸಿಕ್ಕಿಲ್ಲ. ಆದರೆ ನಾಯಕತ್ವ ಬದಲಾವಣೆ ಪ್ರಕ್ರಿಯೆ ಮಾತ್ರ ಆರಂಭವಾಗಿದೆ. ಒಂದು ವಾರದೊಳಗೆ ಎಲ್ಲವನ್ನೂ ನಿಮ್ಮೆದುರು ಹೇಳುತ್ತೇನೆ ಎಂದು ಶಾಸಕ ಬಾಬಾಸಾಹೇಬ್ ಪಾಟೀಲ್ ಅವರು ಹೊಸ ಬಾಂಬ್ ಸಿಡಿಸಿದ್ದಾರೆ.




