CrimeKannada NewsKarnataka NewsLatest

*ಉಪನ್ಯಾಸಕನ ಮೃತದೇಹ ಹೊತ್ತಿ ಉರಿಯುತ್ತಿದ್ದ ರೀತಿಯಲ್ಲಿ ಅಡಿಕೆ ತೋಟದಲ್ಲಿ ಪತ್ತೆ*

ಪ್ರಗತಿವಾಹಿನಿ ಸುದ್ದಿ: ಖಾಸಗಿ ಕಾಲೇಜು ಉಪನ್ಯಾಸಕರೊಬ್ಬರ ಮೃತದೇಹ ಅಡಿಕೆ ತೋಟದಲ್ಲಿ ಬೆಂಕಿ ಹೊತ್ತಿ ಉರಿಯುತ್ತಿದ್ದ ರೀತಿಯಲ್ಲಿ ಪತ್ತೆಯಾಗಿರುವ ಘಟನೆ ನಡೆದಿದೆ.

ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಹೊಳೆಹೊನ್ನೂರು ಬಳಿಯ ಹನುಮಂತಾಪುರದಲ್ಲಿ ಈ ಘಟನೆ ನಡೆದಿದೆ. ಸುರೇಶ್ (58) ಎಂಬುವವರ ಮೃತದೇಹ ಬೆಂಕಿ ಹೊತ್ತಿ ಉರಿಯುತ್ತಿದ್ದ ರೀತಿಯಲ್ಲಿ ಪತ್ತೆಯಾಗಿದೆ.

Home add -Advt

ಶಿವಮೊಗ್ಗದ ಖಾಸಗಿ ಕಾಲೇಜಿನಲ್ಲಿ ಉಪನ್ಯಾಸಕರಾಗಿ ಸುರೇಶ್ ಕಾರ್ಯನಿರ್ವಹಿಸುತ್ತಿದ್ದರು. ಅವರದ್ದೇ ತೋಟದಲ್ಲಿ ಶವ ಬೆಂಕಿ ಹೊತ್ತಿಕೊಂಡ ಸ್ಥಿತಿಯಲ್ಲಿ ಕಂಡುಬಂದಿದ್ದು, ಅಕ್ಕಪಕ್ಕದ ತೋಟದಲ್ಲಿದ್ದವರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ತಕ್ಷಣ ಸ್ಥಳಕ್ಕಾಗಮಿಸಿದ ಹೊಳೆಹೊನ್ನೂರು ಠಾಣೆ ಪೊಲೀಸರು ಬೆಂಕಿ ನಂದಿಸಿದ್ದಾರೆ. ಅಷ್ಟರಲ್ಲಿ ಮೃತದೇಹ ಭಾಗಶಃ ಸುಟ್ಟು ಹೋಗಿದೆ. ಉಪನ್ಯಾಸಕರ ಸಾಅವು ಹಲವು ಅನುಮಾನಕ್ಕೆ ಕಾರಣವಾಗಿದ್ದು, ತನಿಖೆಗೆ ಪೊಲೀಸರು ವಿಶೇಷ ತಂಡ ರಚಿಸಿದ್ದಾರೆ.

Related Articles

Back to top button