Karnataka NewsLatest

*ಖ್ಯಾತ ಜನಪದ ಕಲಾವಿದ, ನಟ ಗುರುರಾಜ್ ಹೊಸಕೋಟೆ ಕಾರು ಭೀಕರ ಅಪಘಾತ*

ಪ್ರಗತಿವಾಹಿನಿ ಸುದ್ದಿ: ಖ್ಯಾತ ಜನಪದ ಕಲಾವಿದ, ಚಿತ್ರನಟ ಗುರುರಾಜ್ ಹೊಸಕೋಟೆ ಪ್ರಯಾಣಿಸುತ್ತಿದ್ದ ಕಾರು ಅಪಘಾತವಾಗಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲೂಕಿನ ಸೊರಗಾವಿ ಬಳಿ ನಡೆದಿದೆ.

ಎದುರಿನಿಂದ ಬರುತ್ತಿದ್ದ ವಾಹನ ತಪ್ಪಿಸಲು ಹೋಗಿ ಕಾರು ರಸ್ತೆ ಪಕ್ಕದ ಬಂಡೆಗಲ್ಲಿಗೆ ಡಿಕ್ಕಿ ಹೊಡೆದಿದೆ. ಕಾರಿನ ಮುಂಭಾಗ ಸಂಪೂರ್ಣ ನುಜ್ಜುಗುಜ್ಜಾಗಿದೆ.

ಅದೃಷ್ಟವಶಾತ್ ಗುರುರಾಜ್ ಹೊಸಕೋಟೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಅಲ್ಲದೇ ಕಾರಿನಲ್ಲಿದ್ದ ಉಳಿದವರಿಗೂ ಯಾವುದೇ ತೊಂದರೆಯಾಗಿಲ್ಲ ಎಂದು ತಿಳಿದುಬಂದಿದೆ.

ಸಿಂಧನೂರಿನಿದ ಮಹಾಲಿಂಗಪುರಕ್ಕೆ ತೆರಳುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ.

Related Articles

Back to top button