ಪ್ರಗತಿವಾಹಿನಿ ಸುದ್ದಿ: ಶಾಸಕ ಮುನಿರತ್ನ ಅವರದ್ದು ಎನ್ನಲಾದ ಆಡಿಯೋವನ್ನು ಎಫ್‌ಎಸ್‌ಎಲ್‌ಗೆ ಕಳುಹಿಸಲಾಗಿದೆ. ಆ ಆಡಿಯೋ ಅವರದ್ದೇ ಎನ್ನುವುದು ಖಚಿತವಾದರೆ ಕಾನೂನು ಪ್ರಕಾರ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಗೃಹ ಸಚಿವ ಜಿ.ಪರಮೇಶ್ವರ್ ಹೇಳಿಕೆ ನೀಡಿದ್ದಾರೆ.
ತುಮಕೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಗೃಹ ಸಚಿವರು, ಗುತ್ತಿಗೆದಾರನಿಗೆ ಜೀವ ಬೆದರಿಕೆ ಹಾಗೂ ಜಾತಿ ನಿಂದನೆ ದೂರಿನ ಮೇರೆಗೆ ಮುನಿರತ್ನ ಅವರ ವಿರುದ್ಧ ಎಫ್‌ಐಆರ್ ದಾಖಲಿಸಿ ಬಂಧನ ಮಾಡಲಾಗಿದೆ. ತನಿಖೆ ಆರಂಭಿಸಲಾಗಿದ್ದು, ಎರಡು ದಿನಗಳ ಪೊಲೀಸ್ ಕಸ್ಟಡಿಗೆ ತೆಗೆದುಕೊಂಡಿದ್ದಾರೆ ಎಂದು ತಿಳಿಸಿದರು.
ಮುನಿರತ್ನ ಅವರು ಆ ರೀತಿ ಹೇಳಿಲ್ಲ. ನನ್ನ ಆಡಿಯೋ ಅಲ್ಲ ಎಂದು ಹೇಳಿದ್ದಾರೆ. ಎಫ್‌ಎಸ್‌ಎಲ್‌ನವರು ಅದನ್ನು ಪರೀಕ್ಷಿಸಿ ಆಡಿಯೋ ಯಾರದ್ದು ಎಂದು ಖಚಿತಪಡಿಸುತ್ತಾರೆ. ಆಡಿಯೋ ಅವರದ್ದೇ ಎಂಬುದು ಖಚಿತವಾದರೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ