ಪ್ರಗತಿವಾಹಿನಿ ಸುದ್ದಿ, ಖಾನಾಪುರ: ತಾಲೂಕಿನ ಭೀಮಗಡ ಅಭಯಾರಣ್ಯ ವ್ಯಾಪ್ತಿಯ ಅಮಗಾಂವ ಕಾಯ್ದಿಟ್ಟ ಅರಣ್ಯಕ್ಕೆ ಬೆಂಕಿ ಹಾಕಿ ವನ್ಯಜೀವಿಗಳ ಪ್ರದೇಶ ಹಾಳುಗೆಡವಿದ ಹಿನ್ನೆಲೆಯಲ್ಲಿ ಐವರು ಆರೋಪಿತರ ವಿರುದ್ಧ ಅರಣ್ಯ ಇಲಾಖೆಯವರು ಕಾನೂನು ಕ್ರಮ ಜರುಗಿಸಿದ್ದಾರೆ.
ಆರೋಪಿತರಿಗೆ ಅರಣ್ಯಾಧಿಕಾರಿಗಳು ನೋಟಿಸ್ ಜಾರಿ ಮಾಡಿ ಕರೆಸಿ ತನಿಖೆ ಕೈಗೊಂಡಾಗ ಆರೋಪಿಗಳು ಅರಣ್ಯ ಪ್ರದೇಶದ ಸರ್ವೆ ನಂ.7ನ್ನು ಅತಿಕ್ರಮಣ ಮಾಡಿ ಮರ ಕಡಿದು ಬೆಂಕಿ ಹಚ್ಚಿದ್ದನ್ನು ಒಪ್ಪಿಕೊಂಡಿದ್ದಾರೆ. ಈ ಜಾಗದಲ್ಲಿ ಆರೋಪಿಗಳು 30- 35 ವರ್ಷಗಳಿಂದ ಗೋಡಂಬಿ ಕೃಷಿ ಮಾಡುತ್ತಿರುವುದು ಮೇಲ್ನೋಟಕ್ಕೆ ಕಂಡುಬಂದಿದೆ. ಆದರೆ ಆರೋಪಿತರು ತಾವು 75 ವರ್ಷಗಳಿಂದ ಗೋಡಂಬಿ ಕೃಷಿ ಮಾಡಿಕೊಂಡು ಬಂದಿರುವುದಾಗಿ ತಿಳಿಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ