Cancer Hospital 2
Beereshwara 33
LaxmiTai 5

*ರಾಜ್ಯದಲ್ಲಿ ಕಾನೂನು ವ್ಯವಸ್ಥೆ ನಿಯಂತ್ರಣದಲ್ಲಿದೆ: ಗೃಹ ಸಚಿವ ಪರಮೇಶ್ವರ*

Anvekar 3
GIT add 2024-1

ಪ್ರಗತಿವಾಹಿನಿ‌ ಸುದ್ದಿ: ಕಾನೂನು ಸುವ್ಯವಸ್ಥೆ ನಿಯಂತ್ರಣದಲ್ಲಿ ಇದೆ. ಬಿಜೆಪಿಯವರನ್ನು ಕೇಳಿಕೊಂಡು ಕಾನೂನು ಪಾಲನೆ ಮಾಡುತ್ತಿಲ್ಲ. ಕಾನೂನು, ಸುವ್ಯವಸ್ಥೆ ಹಾಳು ಮಾಡಲು ಬಿಜೆಪಿಯವರು ಎಷ್ಟೇ ಪ್ರಯತ್ನ ಮಾಡಿದರೂ ಅದನ್ನು ನಿಯಂತ್ರಣ ಮಾಡುವ ಶಕ್ತಿ ಸರ್ಕಾರಕ್ಕಿದೆ ಎಂದು ಗೃಹ ಸಚಿವ ಪರಮೇಶ್ವರ ಅವರು ಹೇಳಿದ್ದಾರೆ.‌

Emergency Service

ತುಮಕೂರಿನಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿ ಅವರು, ಬಿಜೆಪಿಯವರ ಆಡಳಿತದಲ್ಲಿ ಎಷ್ಟು ಕೊಲೆಗಳು ನಡೆದಿದ್ದವು. ನಮ್ಮ ಸರ್ಕಾರದ ಅವಧಿಯಲ್ಲಿ ಎಷ್ಟು ನಡೆದಿವೆ ಎಂಬ ಅಂಕಿ ಸಂಖ್ಯೆ ಬಿಡುಗಡೆ ಮಾಡಲಾಗುವುದು. ಆಗ ಯಾರ ಅವಧಿಯಲ್ಲಿ ಹೆಚ್ಚು ಕೊಲೆಗಳು ನಡೆದಿದ್ದವು ಎಂಬುದು ಜನರಿಗೆ ಗೊತ್ತಾಗುತ್ತದೆ ಎಂದು ತಿಳಿಸಿದರು.

ಜನರ ಸುರಕ್ಷತೆಗಾಗಿ ಕಠಿಣ ಕ್ರಮಗಳನ್ನು ತೆಗೆದುಕೊಳ್ಳಲು ಕಾಂಗ್ರೆಸ್ ಸರ್ಕಾರ ಸಿದ್ಧವಿದೆ.‌ ರಾಜ್ಯದಲ್ಲಿ ಅಪರಾಧ ಪ್ರಕರಣಗಳು ಹೆಚ್ಚಾಗಿರುವ ಬಗ್ಗೆ ಪ್ರತಿಕ್ರಿಯಿಸಿ, ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೊ (ಎನ್‌ಸಿಆರ್‌ಬಿ) ಬಿಡುಗಡೆ ಮಾಡಿರುವ ವರದಿ ಗಮನಕ್ಕೆ ಬಂದಿದೆ. ಈ ಬಗ್ಗೆ ಅಧಿಕಾರಿಗಳ ಜತೆ ಚರ್ಚಿಸಲಾಗುವುದು. ನಾಲ್ಕು ತಿಂಗಳ ವರದಿ ಇಟ್ಟುಕೊಂಡು ವಿಶ್ಲೇಷಣೆ ಮಾಡಲಾಗದು. ಒಂದೊಂದು ಘಟನೆಗೂ ಪ್ರತ್ಯೇಕ ಕಾರಣಗಳು ಇರುತ್ತವೆ ಎಂದು ಹೇಳಿದರು.

Bottom Add3
Bottom Ad 2