Latest

ಪರಿಷತ್ ಗಲಾಟೆ; ರಾಜ್ಯಪಾಲರಿಗೆ ದೂರು ನೀಡಿದ ಬಿಜೆಪಿ-ಜೆಡಿಎಸ್ ನಿಯೋಗ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ವಿಧಾನ ಪರಿಷತ್ ನಲ್ಲಿ ನಡೆದ ಸಂಘರ್ಷಕ್ಕೆ ಸಂಬಂಧಿಸಿದಂತೆ ಬಿಜೆಪಿ-ಜೆಡಿಎಸ್ ನಿಯೋಗ ರಾಜ್ಯಪಾಲರನ್ನು ಭೇಟಿಯಾಗಿ ದೂರು ನೀಡಿದೆ.

ಪರಿಷತ್ ನಲ್ಲಿ ಉಪಸಭಾಪತಿಯನ್ನು ಕಾಂಗ್ರೆಸ್ ಸದಸ್ಯರು ಎಳೆದಾಡಿದ ಪ್ರಕರಣ, ಗಲಾಟೆಗೆ ಸಂಬಂಧಿಸಿದಂತೆ ಬಿಜೆಪಿ-ಜೆಡಿಎಸ್ ಸದಸ್ಯರು ರಾಜ್ಯಪಾಲ ವಜುಭಾಯಿ ವಾಲಾ ಅವರನ್ನು ಭೇಟಿಯಾಗಿ ದೂರು ನೀಡಿದರು. ಈ ವೇಳೆ ಸಭಾಪತಿ ಪೀಠದಲ್ಲಿ ಕುಳಿತಿದ್ದ ಸದಸ್ಯ ಚಂದ್ರಶೇಖರ್ ಪಾಟೀಲ್ ವಿರುದ್ಧವೂ ದೂರು ನೀಡಿದ್ದಾರೆ ಎನ್ನಲಾಗಿದೆ.

ನಿಯೋಗದಲ್ಲಿ ಡಿಸಿಎಂ ಲಕ್ಷ್ಮಣ ಸವದಿ, ಸಚಿವ ಆರ್.ಅಶೋಕ್, ಮಾಧುಸ್ವಾಮಿ, ರಮೇಶ್ ಗೌಡ, ಬಸವರಾಜ್ ಹೊರಟ್ಟಿ, ಪುಟ್ಟಣ್ಣ ಶೆಟ್ಟಿ, ಶಶಿಲ್ ನಮೋಶಿ ಇದ್ದರು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button