ಪ್ರಗತಿವಾಹಿನಿ ಸುದ್ದಿ; ಮಂಗಳೂರು: ವಿಧಾನ ಪರಿಷತ್ ನಲ್ಲಿ ನಡೆದ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್, ಇದು ಪ್ರಜಾಪ್ರಭುತ್ವದ ಕಗ್ಗೊಲೆ ಎಂದು ಕಿಡಿಕಾರಿದ್ದಾರೆ.
ಮಂಗಳೂರಿನಲ್ಲಿ ಮಾತನಾಡಿದ ಅವರು, ಪರಿಷತ್ ನಲ್ಲಿ ನಡೆದ ಸಂಘರ್ಷ ವಿಧಾನ ಪರಿಷತ್ ಇತಿಹಾಸ ಪರಂಪರೆಗೆ ಕಳಂಕವಾಗಿದೆ ಎಂದರು.
ಕಾಂಗ್ರೆಸ್ ಸದಸ್ಯರು ಪರಿಷತ್ ನಿಯಮವನ್ನೇ ಗಾಳಿಗೆ ತೂರಿದ್ದಾರೆ. ಕಾಂಗ್ರೆಸ್ ಸದಸ್ಯರು ಮೊದಲು ರಾಜ್ಯದ ಜನತೆಯ ಕ್ಷಮೆಯಾಚಿಸಬೇಕು ಎಂದು ಆಗ್ರಹಿಸಿದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ