Latest

ಸಂಘರ್ಷದ ಬೆನ್ನಲ್ಲೇ ಪರಿಷತ್ ಕಲಾಪ ಅನಿರ್ಧಿಷ್ಠಾವಧಿಗೆ ಮುಂದೂಡಿಕೆ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ವಿಧಾನಪರಿಷತ್ ನಲ್ಲಿ ಉಪಸಭಾಪತಿಯನ್ನು ಎಳೆದಾಡಿ, ಕಾಂಗ್ರೆಸ್-ಬಿಜೆಪಿ ಸದಸ್ಯರ ನಡುವೆ ನಡೆದ ಗದ್ದಲ-ಕೋಲಾಹಲ ಬೆನ್ನಲ್ಲೇ ಪರಿಷತ್ ಕಲಾಪವನ್ನು ಅನಿರ್ಧಿಷ್ಠಾವಧಿಗೆ ಮುಂದೂಡಲಾಗಿದೆ.

ಸಭಾಪತಿ ಕುರ್ಚಿಯಲ್ಲಿ ಆಸೀನರಾಗಿದ್ದ ಉಪಸಭಾಪತಿ ಧರ್ಮೇಗೌಡರನ್ನು ಕಾಂಗ್ರೆಸ್ ಸದಸ್ಯರು ಎಳೆದಾಡಿದ್ದಾರೆ. ಈ ವೇಳೆ ಕಾಂಗ್ರೆಸ್-ಬಿಜೆಪಿ ಸದಸ್ಯರ ನಡುವೆ ಸಂಘರ್ಷ ಏರ್ಪಟ್ಟಿದ್ದು, ಕೈಕೈ ಮಿಲಾಯಿಸಿಕೊಂಡಿದ್ದಾರೆ. ಕಲಾಪದಲ್ಲಿ ಗದ್ದಲ ಕೋಲಾಹಲ ತಾರಕಕ್ಕೇರಿದ ಬೆನ್ನಲ್ಲೇ ಒಳಗೆ ಬಂದ ಸಭಾಪತಿ ಪ್ರತಾಪ್ ಚಂದ್ರ ಶೆಟ್ಟಿ ಕಲಾಪವನ್ನು ಅನಿರ್ಧಿಷ್ಠಾವಧಿಗೆ ಮುಂದೂಡಿದ್ದಾರೆ.

ಬೆಲ್ ಹೊಡೆಯುವ ಮೊದಲೇ ಸದನದಲ್ಲಿ ಶಿಷ್ಠಾಚಾರ ಉಲ್ಲಂಘಿಸಿ ಉಪಸಭಾಪತಿ ಧರ್ಮೇಗೌಡ ಸಭಾಪತಿ ಪೀಠ ಅಲಂಕರಿಸಿದ್ದೇ ಸಂಘರ್ಷಕ್ಕೆ ಕಾರಣವಾಗಿದೆ ಎನ್ನಲಾಗಿದೆ.

 

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button