ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – ಶಾಸಕ ಅನಿಲ ಬೆನಕೆ ಅವರು ನಗರದ ಶಾಲೆ ನಂ. ೩ ಕ್ಕೆ ಭೇಟಿ ನೀಡಿ ಶಾಲೆಯ ಮುಖ್ಯೋಪಾಧ್ಯಾಯರು ಹಾಗೂ ಶಿಕ್ಷಕರೊಂದಿಗೆ ಸರಕಾರಿ ಶಾಲೆಗಳ ಅಭಿವೃದ್ಧಿಯ ಬಗ್ಗೆ ಚರ್ಚೆ ನಡಿಸಿದರು.
ಚರ್ಚೆಯ ವೆೇಳೆ ಕೇಂದ್ರ ಸರಕಾರದ ಹೊಸ ಶೈಕ್ಷಣಿಕ ನೀತಿಯನ್ನು ಅಳವಡಿಸಿಕೊಂಡು ಕೇಂದ್ರ ಹಾಗೂ ರಾಜ್ಯ ಸರಕಾರದ ವಿವಿಧ ಅಭಿವೃದ್ಧಿಪರ ಯೋಜನೆಗಳಿಂದ ಶಾಲೆಗಳನ್ನು ಅಧುನಿಕರಣಗೊಳಿಸಲು ಪ್ರಯತ್ನವನ್ನು ಕೈಗೊಳ್ಳಲಾಗುವುದು ಎಂದರು.
ಸಧ್ಯದ ಕೊವಿಡ್ ೧೯ ಪರಿಸ್ಥಿತಿಯಲ್ಲಿ ರಾಜ್ಯ ಸರಕಾರವು ಶಾಲೆಗಳ ಆರಂಭದ ಬಗ್ಗೆ ಸೂಕ್ತ ಕ್ರಮಗಳನ್ನು ಕೈಗೊಂಡು ಶಾಲೆಗಳನ್ನು ಪುನಃ: ಆರಂಭಿಸಲಿದೆ ಹಾಗೂ ಮುಂಜಾಗೃತಾ ಕ್ರಮಗಳನ್ನು ಅನುಸರಿಸಿ ಮಕ್ಕಳ ಶೈಕ್ಷಣಿಕ ಮಟ್ಟವನ್ನು ಬೆಳೆಸಬೇಕೆಂದರು. ನಂತರದಲ್ಲಿ ಶಾಲೆಗಳಲ್ಲಿನ ಶೌಚಾಲಯ, ಡೆಸ್ಕ್, ಕೊಠಡಿಗಳ ಕಿಟಕಿ ಹಾಗೂ ಬಾಗಿಲು ಮತ್ತು ಕ್ರೀಡಾ ಸಾಮಗ್ರಿಗಳ ಕೊರತೆಯ ಬಗ್ಗೆ ತಿಳಿದುಕೊಂಡ ಶಾಸಕರು, ಮತಕ್ಷೇತ್ರದ ವ್ಯಾಪ್ತಿಯ ಎಲ್ಲಾ ಸರಕಾರಿ ಶಾಲೆಗಳನ್ನು ಸರಕಾರದ ಸೂಕ್ತ ಅನುದಾನದೊಂದಿಗೆ ಅಭಿವೃದ್ಧಿ ಪಡಿಸಲಾಗುವುದು ಎಂದರು. ಹಾಗೂ ಯಾವುದೇ ಅಡಚಣೆಗಳು ಕಂಡುಬಂದಲ್ಲಿ ಮುಖ್ಯೋಪಾಧ್ಯಾಯರು ತಮ್ಮ ಕಾರ್ಯಾಲಯಕ್ಕೆ ಸಂಪರ್ಕಿಸಬೇಕೆಂದು ತಿಳಿಸಿದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ