Belagavi NewsBelgaum NewsKannada NewsLatest

*ಖಾನಾಪುರ ಜನರಿಗೆ ಚಿರತೆ ಕಾಟ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಖಾನಾಪುರ ತಾಲ್ಲೂಕಿನ ಕಕ್ಕೇರಿ ಗ್ರಾಮದಲ್ಲಿ ಚಿರತೆ ಕಾಣಿಸಿಕೊಂಡಿರುವುದು ಗ್ರಾಮಸ್ಥರಲ್ಲಿ ಆತಂಕಕ್ಕೆ ಕಾರಣವಾಗಿದೆ. 

ಗ್ರಾಮದ ಜೇಕೆ ಕಾಂಪ್ಲೆಕ್ಸ್‌ ಮುಂಭಾಗದಲ್ಲಿ ನಿನ್ನೆ ರಾತ್ರಿ ಸುಮಾರು 12 ಗಂಟೆ ವೇಳೆಗೆ ಚಿರತೆ ಸಂಚರಿಸಿರುವ ದೃಶ್ಯ ಸ್ಥಳೀಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.

ಕತ್ತಲಿನಲ್ಲಿ ಚಿರತೆ ಗ್ರಾಮದಲ್ಲಿ ಓಡಾಡುತ್ತಿರುವ ದೃಶ್ಯ ಇದೀಗ ಸಾಮಾಜಿಕ ಜಾಲತಾಣಗಳಲ್ಲೂ ಹರಿದಾಡುತ್ತಿದ್ದು, ಗ್ರಾಮಸ್ಥರಲ್ಲಿ ಭಯದ ವಾತಾವರಣ ನಿರ್ಮಾಣವಾಗಿದೆ.

ಚಿರತೆ ಮತ್ತೆ ಗ್ರಾಮಕ್ಕೆ ಪ್ರವೇಶಿಸುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ತಕ್ಷಣ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಬೇಕು. ಚಿರತೆಯ ಚಲನವಲನದ ಮೇಲೆ ನಿಗಾ ಇರಿಸಿ, ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಗ್ರಾಮಸ್ಥರು ಒತ್ತಾಯಿಸಿದ್ದಾರೆ.

ಅರಣ್ಯ ಇಲಾಖೆ ಸೂಕ್ತ ಕ್ರಮ ಕೈಗೊಳ್ಳುವವರೆಗೆ ರಾತ್ರಿ ವೇಳೆ ಸಾರ್ವಜನಿಕರು ಹಾಗೂ ರೈತರು ಅನಗತ್ಯವಾಗಿ ಹೊರಗೆ ತೆರಳದೆ ಎಚ್ಚರಿಕೆಯಿಂದ ಇರುವಂತೆ ಮನವಿ ಮಾಡಲಾಗಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button