Belagavi NewsBelgaum NewsKannada NewsKarnataka NewsLatestNationalPolitics
*ಬಿಜೆಪಿಯವರು ಕೇಂದ್ರ ಸರಕಾರದ ವಿರುದ್ಧ ಹೋರಾಡಲಿ: ಡಿಸಿಎಂ ಡಿ.ಕೆ. ಶಿವಕುಮಾರ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಚಳಿಗಾಲದ ಅಧಿವೇಶನ ಆರಂಭವಾಗಿದೆ. ರೈತರಿಗೆ ಕೇಂದ್ರ ಸರಕಾರ ಮೋಸ ಮಾಡುತ್ತಿದೆ. ಕೇಂದ್ರ ಸರಕಾರ ರೈತರ ಬೆಳೆಗಳನ್ನು ಖರೀದಿ ಮಾಡುತ್ತಿಲ್ಲ. ಖರೀದಿ ಮಾಡಲು ವಿರೋಧ ಪಕ್ಷದವರು ಕೇಂದ್ರ ಸರಕಾರಕ್ಕೆ ಒತ್ತಾಯ ಮಾಡಬೇಕು ಎಂದು ಡಿಸಿಎಂ ಡಿ.ಕೆ ಶಿವಕುಮಾರ ಆಕ್ರೋಶ ಹೊರಹಾಕಿದರು.
ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಕೇಂದ್ರ ಸರಕಾರ ರಾಜ್ಯಕ್ಕೆ ಬರುವ ಬಾಕಿ ಹಣ ಬಿಡುಗಡೆ ಮಾಡಬೇಕು ಎಂದು ತಿಳಿಸಿದರು.
ಬಿಜೆಪಿ ಪ್ರತಿಭಟನೆ ವಿಚಾರವಾಗಿ ಮಾತನಾಡಿದ ಅವರು, ನಾವು ರೈತರ ಪರವಾಗಿ ಇದ್ದೇವೆ. ಕಬ್ಬು, ಮೆಕ್ಕೆಜೋಳ, ಖರೀದಿ ರಾಜ್ಯ ಸರಕಾರ ಆರಂಭ ಮಾಡಿದೆ. ನಾವು ಇಂತಿಷ್ಟು ಖರೀದಿ ಮಾಡಬೇಕು ಎಂದು ಆದೇಶ ಮಾಡಿದ್ದೇವೆ. ಎಫ್ ಆರ್ ಪಿ ಬೆಲೆ ಪಿಕ್ಸ್ ಮಾಡೋರು ಕೇಂದ್ರ ಸರಕಾರ. ಹೋರಾಟ ಮಾಡಬೇಕಾಗಿದ್ದು ಕೇಂದ್ರ ಸರಕಾರದ ವಿರುದ್ಧ ಎಂದು ಹೇಳಿದರು.
ಬಿಜೆಪಿಯವರು ಕೇಂದ್ರ ಸರಕಾರದ ವಿರುದ್ಧ ಹೋರಾಟ ಮಾಡಲಿ. ನಮ್ಮ ವಿರುದ್ಧ ಹೋರಾಟ ಮಾಡುತ್ತಿರುವುದು ಸರಿಯಲ್ಲ ಎಂದು ಹೇಳಿದರು.




