Belagavi NewsBelgaum NewsKannada NewsKarnataka News

*ಕಾಂಗ್ರೆಸ್ ಸರ್ಕಾರ ರಾಜೀನಾಮೆ ನೀಡಲಿ: ಬೆಳಗಾವಿಯಲ್ಲಿ ಬಿಜೆಪಿ ಬೃಹತ್ ಪ್ರತಿಭಟನೆ*

ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟು ಹೋಗಿದೆ. ಕೊಲೆಗಳಾದರೂ ರಾಜ್ಯ ಸರ್ಕಾರ ನಿದ್ರೆಯಿಂದ ಎಚ್ಚೆತ್ತಿಲ್ಲವೆಂದು ಆರೋಪಿಸಿ ಶನಿವಾರ ಬೆಳಗಾವಿಯ ಚನ್ನಮ್ಮ ವೃತ್ತದಲ್ಲಿ ಬಿಜೆಪಿ ವತಿಯಿಂದ ಬೃಹತ್ ಪ್ರತಿಭಟನೆ ನಡೆಸಲಾಯಿತು.

Home add -Advt

ಶನಿವಾರ ಬೆಳಗ್ಗೆ ಚೆನ್ನಮ್ಮ ವೃತ್ತದಿಂದ  ಬೃಹತ್ ಪ್ರತಿಭಟನೆ ಆರಂಭಿಸಲಾಯಿತು. ಈ ವೇಳೆ ಮಾತನಾಡಿದ ಮಾಜಿ ಶಾಸಕ ಸಂಜಯ ಪಾಟೀಲ್, ಕಾಂಗ್ರೆಸ್ ಸರ್ಕಾರ ಗ್ಯಾರೆಂಟಿ ಯೋಜನೆಗಳ ಕಡೆಗೆ ಜನರ ಗಮನ ಸೆಳೆದು, ಅಧಿಕಾರಕ್ಕೆ ಬಂದಿದೆ ಆದರೆ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟು ಹೋಗಿದೆ. ನೇಹಾ ಹಿರೇಮಠ್ ಕೊಲೆ ಬಳಿಕ ಸರ್ಕಾರ ಎಚ್ಚೆತ್ತುಕೊಳ್ಳಬೇಕಾಗಿತ್ತು. ಆದರೆ ಆವಾಗ ಸರಿಯಾದ ಕ್ರಮ ಕೈಗೊಳ್ಳದ್ದಿದ್ದರಿಂದ, ಮತ್ತೆ ಹುಬ್ಬಳ್ಳಿಯಲ್ಲಿ ಅಂಜಲಿ ಅಂಬಿಗೇರ್ ಕೊಲೆ ನಡೆದಿದೆ ಎಂದರು.‌

ಈ ಸಂದರ್ಭದಲ್ಲಿ ಮಾಜಿ ಉಪ ಮಹಾಪೌರ ರೇಷ್ಮಾ ಪಾಟೀಲ್, ಮುರುಘೇಂದ್ರ ಗೌಡ ಪಾಟೀಲ್, ಶಿಲ್ಪಾ ಕೆಕರೆ ಸೇರಿದಂತೆ ಇನ್ನುಳಿದ ಪದಾಧಿಕಾರಿಗಳು ಹಾಗೂ ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕರ್ತರು ಭಾಗಿಯಾಗಿದ್ದರು.

Related Articles

Back to top button