*ಚೆನ್ನಮ್ಮನ ಇತಿಹಾಸ ಕುರಿತು ಇನ್ನಷ್ಟು ಸಂಶೋಧನೆಗಳಾಗಲಿ: ಚನ್ನರಾಜ ಹಟ್ಟಿಹೊಳಿ*


ಪ್ರಗತಿವಾಹಿನಿ ಸುದ್ದಿ, ಚೆನ್ನಮ್ಮನ ಕಿತ್ತೂರು : ಬೇರೆ ಹಲವಾರು ಸ್ವಾತಂತ್ರ್ಯ ಹೋರಾಟಗಾರರಿಗೆ ಸಿಕ್ಕಿರುವ ಸ್ಥಾನಮಾನ ಕಿತ್ತೂರು ಚೆನ್ನಮ್ಮನಿಗೆ ಸಿಕ್ಕಿಲ್ಲ. ಹಾಗಾಗಿ ಚೆನ್ನಮ್ಮನ ಇತಿಹಾಸದ ಕುರಿತು ಇನ್ನಷ್ಟು ಸಂಶೋಧನೆಗಳಾಗಬೇಕಿದೆ ಎಂದು ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಹೇಳಿದರು.
ಕಿತ್ತೂರಿನಲ್ಲಿ ಗುರುವಾರ ಆರಂಭವಾಗಿರುವ ಐತಿಹಾಸಿಕ ಕಿತ್ತೂರು ಚೆನ್ನಮ್ಮ 3 ದಿನಗಳ ವಿಜಯೋತ್ಸವ ಕಾರ್ಯಕ್ರಮದ ಉದ್ಘಾಟನೆ ಸಮಾರಂಭದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಮಹಾನ್ ಪುರುಷರ ಇತಿಹಾಸವನ್ನು ಇಂದಿನ ಪೀಳಿಗೆಗೆ ತಿಳಿಸುವ ಉದ್ದೇಶದಿಂದ ಇಂತಹ ಉತ್ಸವಗಳನ್ನು ಆಚರಿಸುತ್ತೇವೆ. ರಾಜ್ಯ ಸರಕಾರದ ಈ ಬಾರಿ 5 ಕೋಟಿ ರೂ. ನೀಡುವ ಮೂಲಕ ಚೆನ್ನಮ್ಮನ ಉತ್ಸವವನ್ನು ಅರ್ಥಪೂರ್ಣವಾಗಿ ಆಚರಿಸಲು ಕ್ರಮ ತೆಗೆದುಕೊಂಡಿದೆ ಎಂದು ಅವರು ಹೇಳಿದರು.

ಸಮಾರಂಭದಲ್ಲಿ ಕಿತ್ತೂರು ಕಲ್ಮಠದ ಶ್ರೀ ಮ.ನಿ.ಪ್ರ.ಸ್ವ ಮಡಿವಾಳ ರಾಜಯೋಗೀಂದ್ರ ಮಹಾಸ್ವಾಮಿಗಳು, ನಿಚ್ಚಣಕಿಯ ಶ್ರೀ ಮ.ನಿ.ಪ್ರ.ಸ್ವ ಪಂಚಾಕ್ಷರಿ ಮಹಾಸ್ವಾಮಿಗಳು, ಬೈಲೂರಿನ ಶ್ರೀ ನಿಜಗುಣಾನಂದ ಮಹಾಸ್ವಾಮಿಗಳು, ಲಿಂಗಾಯತ ಪಂಚಮಸಾಲಿ ಜಗದ್ಗುರುಗಳಾದ ಶ್ರೀ ಬಸವಜಯ ಮೃತ್ಯುಂಜಯ ಸ್ವಾಮೀಜಿ, ಲೋಕೋಪಯೋಗಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ ಜಾರಕಿಹೊಳಿ, ಶಾಸಕರಾದ ಬಾಬಾಸಾಹೇಬ್ ಪಾಟೀಲ, ಸಂಸದರಾದ ವಿಶ್ವೇಶ್ವರ ಹೆಗೆಡೆ ಕಾಗೇರಿ, ಜಿಲ್ಲಾಧಿಕಾರಿಗಳಾದ ಮೊಹಮ್ಮದ ರೋಷನ್, ಎಸ್.ಪಿ ಭೀಮಾಶಂಕರ್ ಗುಳೇದ್, ಜಿಲ್ಲಾ ಪಂಚಾಯತ್ ಕಾರ್ಯ ನಿರ್ವಾಹಕ ಅಧಿಕಾರಿ ರಾಹುಲ್ ಶಿಂಧೆ, ವಿಧಾನ ಪರಿಷತ್ ಸದಸ್ಯರಾದ ಹಣಮಂತ ನಿರಾಣಿ, ಭರಮಣ್ಣ ಉಪ್ಪಾರ, ಜಯಸಿದ್ರಾಮ ಮಾರಿಹಾಳ, ಸ್ಥಳೀಯ ಜನಪ್ರತಿನಿಧಿಗಳು ಇದ್ದರು.



