
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿರುವ ಭಾನುವಾರದ ಜನತಾ ಕರ್ಫ್ಯೂವನ್ನು ಯಶಸ್ವಿಗೊಳಿಸೋಣ ಎಂದು ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಶಂಕರಗೌಡ ಪಾಟೀಲ ಕರೆ ನೀಡಿದ್ದಾರೆ.
ಈ ಕುರಿತು ಹೇಳಿಕೆ ನೀಡಿರುವ ಅವರು, ಇಡೀ ವಿಶ್ವವನ್ನು ಕಂಗೆಡಿಸಿರುವ ಮಹಾಮಾರಿ ಕೊರೋನಾವನ್ನು ಹೊಡೆದೋಡಿಸಲು ಎಲ್ಲರೂ ಒಂದಾಗಿ ಹೋರಾಡುವುದು ಅಗತ್ಯವಾಗಿದೆ. ಅದು ನಿಯಂತ್ರಣ ತಪ್ಪಿದರೆ ಬಹಳ ಕಷ್ಟವಾಗಲಿದೆ. ಹಾಗಾಗಿ ಪ್ರಧಾನಿ ನರೇಂದ್ರ ಮೋದಿ ಭಾನುವಾರ ಜನತಾ ಕರ್ಫ್ಯೂ ಆಚರಿಸಲು ಕರೆ ನೀಡಿದ್ದಾರೆ. ಬೆಳಗ್ಗೆ 7 ಗಂಟೆಯಿಂದ ರಾತ್ರಿ 9 ಗಂಟೆಯವರೆಗೆ ನಾವೆಲ್ಲ ಮನೆಯಿಂದ ಹೊರಗೆ ಬಾರದೆ ಯಶಸ್ವಿಗೊಳಿಸೋಣ ಎಂದು ವಿನಂತಿಸಿದ್ದಾರೆ.
ಕೊರೋನಾ ನಿಗ್ರಹಕ್ಕೆ ಕೇಂದ್ರದ ನರೇಂದ್ರ ಮೋದಿ ಸರಕಾರ ತೆಗೆದುಕೊಂಡಿರುವ ಕ್ರಮ ಮತ್ತು ಕರ್ನಾಟಕದಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸರಕಾರ ತೆಗೆದುಕೊಂಡಿರುವ ಕ್ರಮಗಳು ಎಲ್ಲರಿಂದಲೂ ಪ್ರಶಂಸೆಗೆ ಪಾತ್ರವಾಗಿದೆ. ಸರಕಾರಗಳ ನಿರ್ಧಾರಕ್ಕೆ ನಾವೆಲ್ಲರೂ ಬದ್ಧರಾಗಿದ್ದು ಮಹಾಮಾರಿಯನ್ನು ನಿಗ್ರಹಿಸಬೇಕಿದೆ. ಇದರಲ್ಲಿ ಯಾವುದೇ ರಾಜಕೀಯ ಬೇಡ ಎಂದು ಶಂಕರಗೌಡ ಪಾಟೀಲ ಕೋರಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ