ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ವಿಶ್ವ ಬಾಲ ಕಾರ್ಮಿಕ ಪದ್ಧತಿ ವಿರೋಧಿ ದಿನ-2023ರ ಘೋಷಣೆಯಂತೆ ಬಾಲಕಾರ್ಮಿಕ ಪದ್ಧತಿಯ ನಿರ್ಮೂಲನೆಗೆ ಅಧಿಕಾರಿಗಳು ಶ್ರಮಿಸಬೇಕು. ಎಲ್ಲ ಇಲಾಖೆಗಳ ಸಹಕಾರದೊಂದಿಗೆ ಮಕ್ಕಳಿಗೆ ಶೈಕ್ಷಣಿಕ ನ್ಯಾಯ ಒದಗಿಸುವ ನಿಟ್ಟಿನಲ್ಲಿ ಸ್ಥಳೀಯವಾಗಿ ಕಂಡುಬಂದ ಬಾಲ ಕಾರ್ಮಿಕರನ್ನು ರಕ್ಷಿಸಿ, ಶಿಕ್ಷಣ ಒದಗಿಸಲು ಕೈ ಜೋಡಿಸಬೇಕು ಎಂದು ಬೆಳಗಾವಿ ಉಪ ವಿಭಾಗಾಧಿಕಾರಿ ಬಲರಾಮ ಚವ್ಹಾಣ್ ಅವರು ತಿಳಿಸಿದರು.
ನಗರದ ಕುಮಾರ ಗಂಧರ್ವ ಕಲಾ ಮಂದಿರದಲ್ಲಿ ಸೋಮವಾರ (ಮೇ.12) ನಡೆದ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ವಕೀಲರ ಸಂಘ ಬೆಳಗಾವಿ ಹಾಗೂ ಕಾರ್ಮಿಕ ಇಲಾಖೆಯ ವತಿಯಿಂದ ವಿಶ್ವ ಬಾಲ ಕಾರ್ಮಿಕ ಪದ್ಧತಿ ವಿರೋಧಿ ದಿನ-2023 ರ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಬಾಲ್ಯದಲ್ಲಿ ಆಟವಾಡುತ್ತ , ಶಾಲೆಗೆ ಹೋಗಿ ಕಲಿಯಬೇಕಾದ ಮಕ್ಕಳು ಹಲವಾರು ಕಾರಣಗಳಿಂದ ಹಾಗೂ ಸಮಸ್ಯೆಗಳಿಂದ ಬಾಲ ಕಾರ್ಮಿಕರಾಗಿ ದುಡಿಯುತ್ತಿದ್ದು, ಇದೊಂದು ಸಾಮಾಜಿಕ ಪಿಡುಗು. ಕಟ್ಟಡಗಳ ಕೆಲಸಗಳಲ್ಲಿ, ಅಂಗಡಿ ಮಳಿಗೆಗಳಲ್ಲಿ, ಗಾವiೆðಂಟ್ಸ್ಗಳಲ್ಲಿ, ಬೇಕರಿ, ಗ್ಯಾರೇಜ್, ಹೊಟೇಲ್, ಕಾರ್ಖಾನೆಗಳಲ್ಲಿ, ದೊಡ್ಡ ಮನೆಗಳಲ್ಲಿ ಕೆಲಸದಾಳುಗಳಾಗಿ ಇನ್ನಿತರ ಪ್ರಮುಖ ಸ್ಥಳಗಳಲ್ಲಿ ತಮ್ಮ ದೈಹಿಕ ಹಾಗೂ ಮಾನಸಿಕ ಸಾಮರ್ಥ್ಯಕ್ಕೆ ಕಷ್ಟವಾಗುವಂಥ ಕೆಲಸಗಳನ್ನು ಮಾಡುತ್ತಿದ್ದಾರೆ. ಇದರಿಂದ ಅವರು ಶಿಕ್ಷಣ ವಂಚಿತರಾಗುತ್ತಿದ್ದಾರೆ.
ಬಾಲ ಕಾರ್ಮಿಕರಾಗಿ ದುಡಿಯುತ್ತಿರುವ ಮಕ್ಕಳು ಈ ಕೆಟ್ಟ ವ್ಯವಸ್ಥೆಯಿಂದ ಹೊರಬಂದು ತಮ್ಮ ಹಕ್ಕುಗಳ ಕುರಿತು ಜಾಗೃತಿ ಹೊಂದಿ ದೇಶದ ಉತ್ತಮ ನಾಗರಿಕರಾಗಬೇಕು ಎಂಬುದು ಈ ದಿನದ ಉದ್ದೇಶವಾಗಿದೆ.
ಅರ್ಹತೆಗಿಂತ ಕಡಿಮೆ ವಯಸ್ಸಿನ ಮಕ್ಕಳನ್ನು ದುಡುಸಿಕೊಳ್ಳುವುದು ಕಾನೂನು ಬಾಹಿರ. ಆದರೂ ಕಾನೂನಿನ ಕಣ್ಣು ತಪ್ಪಿಸಿ ಚಿಕ್ಕ ಮಕ್ಕಳನ್ನು ದುಡಿಸಿಕೊಳ್ಳಲಾಗುತ್ತಿದೆ ಇದನ್ನೂ ನಿಯಂತ್ರಣಕ್ಕೆ ತರಲು ಸಾರ್ವಜನಿಕರು ಸಹ ಸಹಕಾರ ನೀಡಬೇಕು ಎಂದು ಬೆಳಗಾವಿ ಉಪ ವಿಭಾಗಾಧಿಕಾರಿ ಬಲರಾಮ ಚವ್ಹಾಣ್ ಅವರು ತಿಳಿಸಿದರು.
ಇಡೀ ವಿಶ್ವದಾದ್ಯಂತ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನ ಆಚರಣೆ ಮಾಡಲಾಗುತ್ತಿದೆ. ಬಾಲ ಕಾರ್ಮಿಕರಾಗಿ ಕೆಲಸಗಳಲ್ಲಿ ತೊಡಗಿಸಿಕೊಳ್ಳಬಾರದು ಎಂದು ಸ್ವಾತಂತ್ರö್ಯ ಪೂರ್ವದಿಂದಲೂ ವಿವಿಧ ಕಾರ್ಮಿಕ ಕಾಯ್ದೆಗಳು ಜಾರಿಯಲ್ಲಿವೆ. ಬಹುಮುಖ್ಯವಾಗಿ 1986 ರಲ್ಲಿ ಕೇಂದ್ರ ಸರ್ಕಾರದಿಂದ ಕಠಿಣ ಕಾಯ್ದೆ ಜಾರಿಗೊಳಿಸಲಾಯಿತು.
ಬಾಲ ಕಾರ್ಮಿಕ ಪದ್ಧತಿ 2016ರ ತಿದ್ದುಪಡಿಯಂತೆ 14 ವರ್ಷದೊಳಗಿನ ಮಕ್ಕಳಿಗೆ ಕಡ್ಡಾಯವಾಗಿ ಶಿಕ್ಷಣ ನೀಡಬೇಕು. ಯಾವುದೇ ಕಾರಣಕ್ಕೂ ಮಕ್ಕಳನ್ನು ದುಡಿಮೆಗೆ ಬಳಸಿಕೊಳ್ಳಬಾರದು. ಮಕ್ಕಳ ಪ್ರತಿಭೆ ಗುರುತಿಸಿ ಬೆಳಕಿಗೆ ತರಬೇಕು.
ಮನೆಯಲ್ಲಿ ಬಡತನ, ಜವಾಬ್ದಾರಿ ಹೀಗೆ ಅನೇಕ ಸಂಸ್ಥೆಗಳಿಂದ ಮಕ್ಕಳು ಬಾಲಕಾರ್ಮಿಕ ಪದ್ಧತಿಯಲ್ಲಿ ತೊಡಗಿಕೊಳ್ಳುತ್ತಿದ್ದಾರೆ. ಅಂತಹ ಮಕ್ಕಳನ್ನು ರಕ್ಷಿಸಿ, ಕಡ್ಡಾಯ ಶಿಕ್ಷಣ ಕಾಯ್ದೆ ಮೂಲಕ ಮಕ್ಕಳಿಗೆ ಶಿಕ್ಷಣ ನೀಡಬೇಕು ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಸದಸ್ಯ ಕಾರ್ಯದರ್ಶಿ ಮುರಳಿ ಮೋಹನ್ ರೆಡ್ಡಿ ಅವರು ತಿಳಿಸಿದರು.
ಕೆಲವೆಡೆ ಬಾಲಕಾರ್ಮಿಕ ಪದ್ಧತಿಯಲ್ಲಿ ತೊಡಗಿಕೊಳ್ಳಲು ಬೆಂಬಲ ನೀಡುವ ಪೋಷಕರಿದ್ದಾರೆ ಅದಕ್ಕಾಗಿ ಬಾಲ ಕಾರ್ಮಿಕರ ಪದ್ಧತಿ ಕಾನೂನು ಬಾಹಿರ ಕೆಲಸ ಎಂಬುವ ಕುರಿತು ಇನ್ನಷ್ಟು ಜಾಗೃತಿ ಕಾರ್ಯಕ್ರಮ ಆಗಬೇಕಿದೆ.
ಕೆಲವು ಹೋಟೆಲ್, ಅಂಗಡಿಗಳಲ್ಲಿ ಕಡಿಮೆ ಬೆಲೆಯಲ್ಲಿ ಕಾರ್ಮಿಕರು ಸಿಗುವ ಉದ್ದೇಶದಿಂದ ಮಕ್ಕಳನ್ನು ಈ ಕಾರ್ಯದಲ್ಲಿ ತೊಡಗಿಸಿಕೊಳ್ಳುತಾರೆ. ಇಂತಹ ಘಟನೆಗಳು ಕಂಡು ಬದಲ್ಲಿ ತಕ್ಷಣ ಮಕ್ಕಳ ಸಹಾಯವಾಣಿಗೆ ಕರೆ ಮಾಡಿ ಮಕ್ಕಳನ್ನು ರಕ್ಷಿಸಲು ಸಾರ್ವಜನಿಕರು ಸಹಕಾರ ನೀಡಬೇಕು ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಸದಸ್ಯ ಕಾರ್ಯದರ್ಶಿ ಮುರಳಿ ಮೋಹನ್ ರೆಡ್ಡಿ ಹೇಳಿದರು.
ಪ್ರೋತ್ಸಾಹ ಧನ ಚೆಕ್ ವಿತರಣೆ:
ವಿಶ್ವ ಬಾಲ ಕಾರ್ಮಿಕ ಪದ್ಧತಿ ವಿರೋಧಿ ದಿನ-2023ರ ಘೋಷಣೆ ಮೂಲಕ ಬಾಲಕಾರ್ಮಿಕರ ರಕ್ಷಣೆ ಕುರಿತು ಪ್ರಮಾಣವಚನ ಸ್ವೀಕರಿಸಲಾಯಿತು. ಬಳಿಕ ಈ ಹಿಂದೆ ಬಾಲಕಾರ್ಮಿಕ ಪದ್ಧತಿಯಿಂದ ಹೊರಬಂದು ಎಸ್.ಎಸ್.ಎಲ್.ಸಿ ಹಾಗೂ ಪಿಯುಸಿಯಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ಚೆಕ್ ವಿತರಿಸಲಾಯಿತು.
ಪೊಲೀಸ್ ವರಿಷ್ಠಾಧಿಕಾರಿ ಸಂಜೀವ ಪಾಟೀಲ, ಜಿಲ್ಲಾ ಪಂಚಾಯಿತಿ ಮುಖ್ಯ ಯೋಜನಾ ನಿರ್ದೇಶಕರಾದ ಗಂಗಾಧರ್, ಉಪ ಕಾರ್ಮಿಕ ಆಯುಕ್ತ ನಾಗೇಶ್, ಶಾಲಾ ಸುರಕ್ಷರತ ಇಲಾಖೆಯ ಉಪ ನಿರ್ದೇಶಕ ಬಸವರಾಜ ನಾಲತವಾಡ, ಬೆಳಗಾವಿ ಜಿಲ್ಲಾ ಕ್ಷೇತ್ರ ಶಿಕ್ಷಣಾಧಿಕಾರಿ ರವಿ ಭಜಂತ್ರಿ ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.
ಬಾಲಕಾರ್ಮಿಕ ಸಂಸ್ಥೆಯ ಯೋಜನಾ ನಿರ್ದೇಶಕರಾದ ಜ್ಯೋತಿ ಕಾಂತೆ ಅವರು ನಿರೂಪಿಸಿದರು, ಕಾರ್ಮಿಕ ಇಲಾಖೆ ಅಧಿಕಾರಿ ತರನ್ನುಂ ಬಂಗಾಲಿ ವಂದಿಸಿದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ