Kannada NewsKarnataka NewsNationalPolitics

*ನೀರಾವರಿ ಯೋಜನೆಗಳನ್ನು ತ್ವರಿತವಾಗಿ ಮುಗಿಸೋಣ: ಕೇಂದ್ರ ಸಚಿವ ಕುಮಾರಸ್ವಾಮಿ* 

ಪ್ರಗತಿವಾಹಿನಿ ಸುದ್ದಿ: ಕರ್ನಾಟಕ ಸರ್ಕಾರದ ದೆಹಲಿ ವಿಶೇಷ ಪ್ರತಿನಿಧಿಗಳಾದ ಟಿ.ಬಿ.ಜಯಚಂದ್ರ ಮತ್ತು ಪ್ರಕಾಶ ಹುಕ್ಕೇರಿ ಅವರು ದೆಹಲಿಯಲ್ಲಿ ಇಂದು ಕೇಂದ್ರ ಸರ್ಕಾರದ ಉಕ್ಕು ಹಾಗೂ ಬೃಹತ್ ಕೈಗಾರಿಕಾ ಸಚಿವ ಹೆಚ್ .ಡಿ. ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿ ರಾಜ್ಯದ ಬಾಕಿ ಕೈಗಾರಿಕಾ ಯೋಜನೆಗಳ ಬಗ್ಗೆ ಚರ್ಚಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಕುಮಾರಸ್ವಾಮಿ ಅವರು ಪಕ್ಷ ಭೇದ ಮರೆತು ರಾಜಕೀಯ ಹೊರತುಪಡಿಸಿ ರಾಜ್ಯದ ಅಭಿವೃದ್ಧಿಗೆ ಒಟ್ಟಾಗಿ  ಶ್ರಮಿಸೋಣ. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಕರ್ನಾಟಕದ ಬಗ್ಗೆ ತುಂಬಾ ಸಕಾರಾತ್ಮಕವಾಗಿದ್ದಾರೆ. ಎಲ್ಲರೂ ಸೇರಿ ರಾಜ್ಯದ ಅಭಿವೃದ್ಧಿಗೆ ಶ್ರಮಿಸೋಣ, ಹೆಚ್ಚು ಅನುದಾನವನ್ನು ಪಡೆಯೋಣ. ನೀರಾವರಿ ಯೋಜನೆಗಳನ್ನು ತ್ವರಿತವಾಗಿ ಮುಗಿಸೋಣ ಎಂದು ಕೇಂದ್ರ ಸಚಿವ ಕುಮಾರಸ್ವಾಮಿ ಹೇಳಿದ್ದಾರೆ. 

Home add -Advt

ಟಿ.ಬಿ.ಜಯಚಂದ್ರ ಅವರು ಸಹ ರಾಜ್ಯದ ಸಮಗ್ರ ಅಭಿವೃದ್ಧಿ ಗೆ ಸಂಪೂರ್ಣ ಸಹಕಾರ ನೀಡುವುದಾಗಿ ಹೇಳಿದ್ದಾರೆ.

Related Articles

Back to top button