Latest

ಸಂಪುಟದ ತೀರ್ಮಾನಕ್ಕೆ ಕಾದು ನೊಡೋಣ: ಬಸವರಾಜ ಬೊಮ್ಮಾಯಿ

ಪ್ರಗತಿವಾಹಿನಿ ಸುದ್ದಿ, ಹಾವೇರಿ: ರಾಜ್ಯ ಕಾಂಗ್ರೆಸ್ ಸರ್ಕಾರದ ಗ್ಯಾರೆಂಟಿಗಳ ಬಗ್ಗೆ ಸಂಪುಟದಲ್ಲಿ ಯಾವ ತೀರ್ಮಾನ ತೆಗೆದುಕೊಳ್ಳುತ್ತಾರೊ ಕಾದು ನೋಡೋಣ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು.

ಹಾವೇರಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಗ್ಯಾರಂಟಿ ಜಾರಿ ಮಾಡಲು ಮುಖ್ಯಮಂತ್ರಿಗಳು ಸಭೆಗಳನ್ನು ಮಾಡಲಿ, ನಾಳೆ ಕ್ಯಾಬಿನೆಟ್ ಸಭೆಯಲ್ಲಿ ಎಲ್ಲವೂ ಗೊತ್ತಾಗಲಿದೆ. ಯಾವುದು ಕೊಡುತ್ತಾರೆ ಯಾವುದು ಇಲ್ಲ, ಯಾವ ಶರತ್ತುಗಳನ್ನು ಹಾಕುತ್ತಾರೆ ಎನ್ನುವುದು ಗೊತ್ತಾಗುತ್ತದೆ” ಎಂದರು.

“ಡಿಸಿಎಂ ಡಿ. ಕೆ. ಶಿವಕುಮಾರ್ ಶಾಸಕ ಲಕ್ಷ್ಮಣ ಸವದಿ ಹಾಗೂ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರನ್ನು ಭೇಟಿ ಮಾಡಿರುವುದು ಅವರ ಪಕ್ಷದ ವಿಚಾರ” ಎಂದಷ್ಟೇ ಹೇಳಿದರು.

“ಪಠ್ಯಪುಸ್ತಕ ಪರಿಷ್ಕರಣೆ ಮಾಡಲು ಸಮಿತಿ ಮಾಡುವುದಾಗಿ ಹೇಳಿದ್ದಾರೆ. ಏನು ಬದಲಾವಣೆ ಮಾಡುತ್ತಾರೆ ಎಂದು ಕಾದು ನೋಡೊಣ” ಎಂದು ಹೇಳಿದರು.

Home add -Advt

 

Related Articles

Back to top button