Belagavi NewsBelgaum NewsKarnataka News

*ಸೆ.27 ರಂದು ವಿಶ್ವ ಪ್ರವಾಸೋದ್ಯಮ ದಿನಾಚರಣೆ: ಫೊಟೊಗ್ರಾಫಿ ಸ್ಪರ್ಧೆಗಳ ಆಯೋಜನೆ*

ಪ್ರಗತಿವಾಹಿನಿ ಸುದ್ದಿ: ಜಿಲ್ಲಾಡಳಿತ, ಪ್ರವಾಸೋದ್ಯಮ ಇಲಾಖೆಯ ವತಿಯಿಂದ ಸೆ. 27 ರಂದು ಬೆಳಗ್ಗೆ 11 ಗಂಟೆಗೆ ಬೆಳಗಾವಿ ಕ್ಲಬ್ ಸಂಭಾಂಗಣದಲ್ಲಿ ವಿಶ್ವ ಪ್ರವಾಸೋದ್ಯಮ ದಿನಾಚರಣೆಯನ್ನು ಆಚರಿಸಲಾಗುತ್ತಿದ್ದು, ಈ ಹಿನ್ನಲೆಯಲ್ಲಿ ಜಿಲ್ಲೆಯ ವಿಶೇಷತೆ ಕುರಿತು ಉತ್ತಮ ವೀಡಿಯೋ ಮತ್ತು ಪೋಟೋ ತೆಗೆಯುವ ಸ್ಪರ್ಧೆಯನ್ನು ಏರ್ಪಡಿಸಲಾಗಿರುತ್ತದೆ.

ಆಸಕ್ತರು ಸೆ.25 ರೊಳಗಾಗಿ ತಾವು ತೆಗೆದ ಜಿಲ್ಲೆಯ ವಿಡಿಯೋ ಹಾಗೂ ಪೋಟೋಗಳನ್ನು ಪ್ರವಾಸೋದ್ಯಮ ಇಲಾಖೆಯ ಕಚೇರಿಗೆ ಕಳಿಸುವ ಮೂಲಕ ಬಹುಮಾನವನ್ನು ಪಡೆಯಬಹುದು. ಹೆಚ್ಚಿನ ಮಾಹಿತಿಗಾಗಿ ರತನ್ ಶೆಟ್ಟಿಮೆಳಿ, ಡಿ.ಟಿ.ಸಿ ದೂರವಾಣಿ: 9591778824, ಹಾಗೂ 919019797651 ಸಂಖ್ಯೆಗೆ ಸಂಪರ್ಕಿಸಬಹುದು ಎಂದು ಜಿಲ್ಲೆಯ ಪ್ರವಾಸೋದ್ಯಮ ಇಲಾಖೆಯ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Home add -Advt

Related Articles

Back to top button