Latest

ಯುಪಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥಗೆ ಜೀವಬೆದರಿಕೆ

ಪ್ರಗತಿವಾಹಿನಿ ಸುದ್ದಿ, ಲಕ್ನೋ: ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರಿಗೆ ಅಪರಿಚಿತ ವ್ಯಕ್ತಿಯಿಂದ ಜೀವ ಬೆದರಿಕೆ ಕರೆ ಬಂದಿದ್ದು ಅವರ ಭದ್ರತೆಯನ್ನು ಇನ್ನಷ್ಟು ಹೆಚ್ಚಿಸಲಾಗಿದೆ.

112 ಸಂಖ್ಯೆಗೆ ಅಪರಿಚಿತ ವ್ಯಕ್ತಿಯೊಬ್ಬ ಬೆದರಿಕೆ ಕರೆ ಮಾಡಿದ್ದು ಸುಶಾಂತ್ ಗಾಲ್ಫ್ ಸಿಟಿ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ. ಕರೆ ಮಾಡಿದ ವ್ಯಕ್ತಿ ಪತ್ತೆಗಾಗಿ ಪೊಲೀಸರು ಕಾರ್ಯಾಚರಣೆ ನಡೆಸುತ್ತಿದ್ದಾರೆ.

ಒಂದು ವಾರದ ಹಿಂದಷ್ಟೇ ಯೋಗಿ ಆದಿತ್ಯನಾಥ ಅವರಿಗೆ ವ್ಯಕ್ತಿಯೊಬ್ಬ ಜಾಲತಾಣದಲ್ಲಿ ಜೀವಬೆದರಿಕೆ ಒಡ್ಡಿದ್ದು ಆತನನ್ನು ಪೊಲೀಸರು ಬಂಧಿಸಿದ್ದರು. ಅದರ ಬೆನ್ನಲ್ಲೇ ಈ ಘಟನೆ ನಡೆದಿದೆ. ನಾಳೆಯಿಂದಲೇ ವಿವಿಧ ಸಾರ್ವಜನಿಕ ಸಭೆಗಳಲ್ಲಿ ಯೋಗಿ ಆದಿತ್ಯನಾಥ ಅವರು ಭಾಗವಹಿಸಲಿದ್ದು ಅವರ ಭದ್ರತಾ ವ್ಯವಸ್ಥೆಯನ್ನು ಇನ್ನಷ್ಟು ಬಿಗುಗೊಳಿಸಲಾಗಿದೆ.

ಉತ್ತರ ಪ್ರದೇಶದಲ್ಲಿ ಯೋಗಿ ನೇತೃತ್ವದ ಸರಕಾರ ಅಸ್ತಿತ್ವಕ್ಕೆ ಬಂದ ನಂತರ ಗೂಂಡಾಗಿರಿ, ಭಯೋತ್ಪಾದನೆಗಳ ವಿರುದ್ಧ ಕೈಗೊಂಡ ಅನೇಕ ಕಠಿಣ ಕ್ರಮಗಳ ಹಿನ್ನೆಲೆಯಲ್ಲಿ ಅವರ ವಿರುದ್ಧ ಸೇಡು ತೀರಿಸಿಕೊಳ್ಳುವ ಸಂಚು ನಡೆದಿರುವುದಾಗಿ ಅಧಿಕೃತ ಮೂಲಗಳು ತಿಳಿಸಿವೆ.

Home add -Advt
https://pragati.taskdun.com/vidhanasabha-electiondogsaysnext-cmh-d-kumaraswamy/
https://pragati.taskdun.com/life-journey-is-smooth-if-there-is-timing-and-ingenuity/

https://pragati.taskdun.com/d-b-inamadardeathbelagavi/

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button