Kannada NewsLatestPolitics

ಡಾ.ಪ್ರಭಾಕರ ಕೋರೆಗೆ ಜೀವಮಾನ ಸಾಧನೆ ಪ್ರಶಸ್ತಿ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ
ರಾಜ್ಯಸಭಾ ಸದಸ್ಯ ಹಾಗೂ ಕೆಎಲ್‌ಇ ಸಂಸ್ಥೆಯ ಕಾರ್ಯಾಧ್ಯಕ್ಷ  ಡಾ.ಪ್ರಭಾಕರ ಕೋರೆ ಯವರಿಗೆ ಶಿಕ್ಷಣ ಹಾಗೂ ಆರೋಗ್ಯ ಕ್ಷೇತ್ರದಲ್ಲಿ ಸಲ್ಲಿಸಿದ ಮೌಲಿಕ ಕೊಡುಗೆಯನ್ನು ಪರಿಗಣಿಸಿ ನವಭಾರತ ರಾಷ್ಟ್ರೀಯ ಪತ್ರಿಕೆಯು ಜೀವಮಾನ ಸಾಧನೆ ಪ್ರಶಸ್ತಿ ನೀಡಿ ಗೌರವಿಸಿದೆ.

ಇತ್ತೀಚಿಗೆ ಮುಂಬಯಿ ತಾಜ್ ಹೊಟೆಲ್ ನಲ್ಲಿ ಜರುಗಿದ ಭವ್ಯ ಸಮಾರಂಭದಲ್ಲಿ  ತನ್ನ 85ನೇ ವಾರ್ಷಿಕೋತ್ಸವ ಸಮಾರಂಭದಲ್ಲಿ ಡಾ.ಪ್ರಭಾಕರ ಕೋರೆಯವರಿಗೆ ಪ್ರಶಸ್ತಿಯನ್ನು ನೀಡಿತು.
ಮಹಾರಾಷ್ಟ್ರದ ಶಿಕ್ಷಣ ಸಚಿವ ವಿನೋದ ತವಡೆ ಅವರು ಡಾ.ಪ್ರಭಾಕರ ಕೋರೆಯವರಿಗೆ ಪ್ರಶಸ್ತಿಯನ್ನು ನೀಡಿ ಸತ್ಕರಿಸಿ ಅಭಿನಂದಿಸಿದರು. ಈ ಸಂದರ್ಭದಲ್ಲಿ ರಾಷ್ಟ್ರಮಟ್ಟದ ಹಲವಾರು ಶಿಕ್ಷಣ ತಜ್ಞರು ಹಾಗೂ ವಿವಿಧ ಶಿಕ್ಷಣ ಸಂಸ್ಥೆಗಳ ಮುಖ್ಯಸ್ಥರು ಉಪಸ್ಥಿತರಿದ್ದರು.

Home add -Advt

Related Articles

Back to top button