ಪ್ರಗತಿವಾಹಿನಿ ಸುದ್ದಿ; ನೊಯ್ಡಾ: ಲಿಫ್ಟ್ ಕುಸಿದು ಬಿದ್ದು ನಾಲ್ವರು ಕಾರ್ಮಿಕರು ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದ ಗ್ರೇಟರ್ ನೊಯ್ಡಾದಲ್ಲಿ ನಡೆದಿದೆ.
ಗ್ರೇಟರ್ ನೊಯ್ಡಾದ ವೆಸ್ಟ್ ನಲ್ಲಿ ಡ್ರೀಮ್ ವ್ಯಾಲಿ ಪ್ರಾಜೆಕ್ಟ್ ನಲ್ಲಿ ನಿರ್ಮಾಣ ಹಂತದ ಕಟ್ಟಡ ಕಾಮಗಾರಿ ನಡೆಯುತ್ತಿದ್ದ ವೇಳೆ ಏಕಾಏಕಿ ಲಿಫ್ಟ್ ಕುಸಿದು ಬಿದ್ದಿದ್ದು, ನಾಲ್ವರು ಕಾರ್ಮಿಕರು ಮೃತಪಟ್ಟಿದ್ದಾರೆ. ಐವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಗಾಯಾಳುಗಳನ್ನು ಗ್ರೇಟರ್ ನೊನ್ಡಾ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಯಿಂದಾಗಿ ಕೆಲ ಕಾಲ ಸ್ಥಳದಲ್ಲಿ ಗೊಂದಲದ ವಾತಾವರಣ ನಿರ್ಮಾಣವಾಗಿತ್ತು. ನಿರ್ಮಾಣ ಹಂತದ ಕಟ್ಟಡದಲ್ಲಿ ಈ ದುರಂತ ಸಂಭವಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ