Karnataka News

*ಸಿಡಿಲು ಬಡಿದು ಮೂವರು ದುರ್ಮರಣ*

ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಮತ್ತೆ ವರುಣಾರ್ಭಟ ಜೋರಾಗಿದ್ದು, ಹಲವು ಜಿಲ್ಲೆಗಳಲ್ಲಿ ಅನಾಹುತಗಳು ಸಂಭವಿಸುತ್ತಿವೆ. ಸಿಡಿಲು ಬಡಿದು ಮೂವರು ಸಾವನ್ನಪ್ಪಿರುವ ಘಟನೆ ಯಾದಗಿರಿ ಜಿಲ್ಲೆಯಲ್ಲಿ ನಡೆದಿದೆ.

ಸಿಡಿಲಬ್ಬರಕ್ಕೆ ಮೂವರು ಸಾವನ್ನಪ್ಪಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. 22 ವರ್ಷದ ಚೇನು, 30 ವರ್ಷದ ಕಿಶನ್ ಹಾಗೂ ಸುಮಿ ಬಾಯಿ ಮೃತ ದುರ್ದೈವಿಗಳು. ಮೂವರು ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

Home add -Advt

ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಏಕಾಏಕಿ ಸಿಡಿಲು ಬಡಿದ ಪರಿಣಾಮ ಈ ದುರಂತ ಸಂಭವಿಸಿದೆ.


Related Articles

Back to top button