ಪ್ರಗತಿವಾಹಿನಿ ಸುದ್ದಿ, ಬೆಂಗಳೂರು – ಲಿಂಗಾಯತ ಪಂಚಮಸಾಲಿ ಸಮಾಜಕ್ಕೆ ರಾಜ್ಯ ಸರ್ಕಾರದ 2 ಎ ಹಾಗೂ ಕೇಂದ್ರ ಸರ್ಕಾರದ ಒಬಿಸಿ ಮೀಸಲಾತಿ ಹಕ್ಕೊತ್ತಾಯಕ್ಕೆ ಕೆಲವೇ ದಿನಗಳಲ್ಲಿ ಒಳ್ಳೆಯ ನಿರ್ಧಾರವನ್ನು ಕೈಗೊಳ್ಳುತ್ತೇವೆ ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಇಂದು ( 26 ನವಂಬರ್ 20) ಕೂಡಲಸಂಗಮ ಲಿಂಗಾಯತ ಪಂಚಮಸಾಲಿ ಜಗದ್ಗುರು ಬಸವ ಜಯ ಮೃತ್ಯುಂಜಯ ಸ್ವಾಮೀಜಿಯವರ ನಿಯೋಗಕ್ಕೆ ಸಕಾರಾತ್ಮಕ ಭರವಸೆ ನೀಡಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
ಪಂಚಮಸಾಲಿ ಮೀಸಲಾತಿಗಾಗಿ ಆಗ್ರಹಿಸಿ ಕೂಡಲಸಂಗಮ ಜಗದ್ಗುರುಗಳವರು ಆಕ್ಟೊಬರ್ 28ರಂದು ಬೆಳಗಾವಿಯ ಸುವರ್ಣವಿಧಾನಸೌಧದ ಮುಂಭಾಗದಲ್ಲಿ ಉಪವಾಸ ಸತ್ಯಾಗ್ರಹ ಹಮ್ಮಿಕೊಂಡಿದ್ದರು.
ಮುಖ್ಯಮಂತ್ರಿಗಳು ಫೋನ್ ಮೂಲಕ ಉಪವಾಸ ಕೈಬಿಡುವಂತೆ ಸಂಪರ್ಕಿಸಿದಾಗ, ನವಂಬರ್ 28 ರ ಒಳಗಾಗಿ ಸರ್ಕಾರ ಸ್ಪಂದಿಸಬೇಕು ಎಂಬ ಕಾಲಮಿತಿಯನ್ನು ಸಿಎಂ ರವರು ಒಪ್ಪಿದ ಮೇಲೆ ಶ್ರೀಗಳು ಸತ್ಯಾಗ್ರವನ್ನು ಅಂತ್ಯಗೊಳಿಸಿದರು.
ಅದರಂತೆ ಇಂದು ಭೇಟಿ ಮಾಡಿದಾಗ ಮುಖ್ಯಮಂತ್ರಿಗಳು ಕೆಲವೇ ದಿನಗಳಲ್ಲಿ ಒಳ್ಳೆಯ ನಿರ್ಧಾರವನ್ನು ತೆಗೆದುಕೊಳ್ಳುತ್ತೇವೆ ಎಂದು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ.
ಈ ಸಂದರ್ಭದಲ್ಲಿ ಅಖಿಲ ಭಾರತ ಲಿಂಗಾಯತ ಪಂಚಮಸಾಲಿ ರಾಜ್ಯ ಯುವ ಘಟಕದ ಅಧ್ಯಕ್ಷರಾದ ಸೋಮಶೇಖರ್ ಹಲ್ಯಾಲ್ ಉಪಸ್ಥಿತರಿದ್ದರು ಎಂದು ಪ್ರಕಟಣೆ ತಿಳಿಸಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ