Kannada NewsKarnataka NewsLatestPolitics

*ಬಿಜೆಪಿ ಟಿಕೆಟ್ ಕೊಡಿಸುವುದಾಗಿ ಹೇಳಿ ಕೋಟ್ಯಂತರ ರೂಪಾಯಿ ವಂಚನೆ; ಮತ್ತೋರ್ವ ಆರೋಪಿ ಅರೆಸ್ಟ್*

ಪ್ರಗತಿವಾಹಿನಿ ಸುದ್ದಿ; ಬಳ್ಳಾರಿ: ಬಿಜೆಪಿ ಟಿಕೆಟ್ ಕೊಡಿಸುವುದಾಗಿ ಹೇಳಿ ಕೋಟ್ಯಂತರ ರೂಪಾಯಿ ವಂಚಿಸಿದ್ದ ಮತ್ತೋರ್ವ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಬಿಜೆಪಿ ಮಾಜಿ ಮುಖಂಡ ಹಾಗೂ ಹಾಲಿ ಕೆಆರ್ ಪಿಪಿ ಪಕ್ಷದ ನಾಯಕ ರೇವಣ ಸಿದ್ದಪ್ಪ ಬಂಧಿತ ಆರೋಪಿ. ಹಗರಿಬೊಮ್ಮನಹಳ್ಳಿ ಕ್ಷೇತ್ರದ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ಹೇಳಿ ನಿವೃತ್ತ ಇಂಜಿನಿಯರ್ ಶಿವಮೂರ್ತಿ ಎಂಬುವವರಿಗೆ ಬರೋಬ್ಬರಿ ೧.೯೫ ಕೋಟಿ ವಂಚಿಸಿದ್ದನಂತೆ.

Home add -Advt

ಹಗರಿಬೊಮ್ಮನಹಳ್ಳಿಗೆ ಬೇರೆಯವರಿಗೆ ಬಿಜೆಪಿ ಟಿಕೆಟ್ ಘೋಷಣೆಯಾಗುತ್ತಿದ್ದಂತೆ ಹಣ ವಾಪಾಸ್ ಕೇಳಿದ್ದಕ್ಕೆ ಶಿವಮೂರ್ತಿ ಎಂಬುವವರಿಗೆ ರೇವಣ ಸಿದ್ದಪ್ಪ ಬೆದರಿಕೆ ಹಾಕಿದ್ದ. ಈ ಬಗ್ಗೆ ಊರಿನ ಮುಖಂಡರ ಸಮ್ಮುಖದಲ್ಲಿ ರಾಜಿ ಮಾಡಲಾಗಿತ್ತು. ಈ ವೇಳೆ ಆರೋಪಿ ರೇವಣ ಸಿದ್ದಪ್ಪ ಹಣ ವಾಪಾಸ್ ಕೊಡುವುದಾಗಿ ಹೇಳಿದ್ದ. ಅಲ್ಲದೇ ಎರಡು ಚೆಕ್ ಗಳನ್ನು ಕೊಟ್ಟಿದ್ದನಂತೆ ಆದರೆ ಈ ಚೆಕ್ ಗಳು ಬೌನ್ಸ್ ಆಗಿದ್ದರಿಂದ ಶಿವಮೂರ್ತಿಯವರು ಕೊಟ್ಟೂರು ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು.

ತನ್ನ ವಿರುದ್ಧ ಕೇಸ್ ದಾಖಲಾಗುತ್ತಿದ್ದಂತೆ ತಲೆಮರೆಸಿಕೊಂಡಿದ್ದ ರೇವಣ ಸಿದ್ದಪ್ಪ ಈಗ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾನೆ.

Related Articles

Back to top button