Belagavi NewsBelgaum NewsKannada NewsKarnataka News
*ಬೆಳಗಾವಿಯಲ್ಲಿ ಎರಡು ದಿನ ಮದ್ಯ ಮಾರಾಟ ನಿಷೇಧ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಬೆಳಗಾವಿ ನಗರದ ಮಾಳಮಾರುತಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬರುವ ಬಸವನ ಕುಡಚಿ ಗ್ರಾಮದಲ್ಲಿ ಶ್ರೀ ಬಸವೇಶ್ವರ ಜಾತ್ರೆಯ ಪ್ರಯುಕ್ತ ಜಾತ್ರೆಯಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ನೋಡಿಕೊಳ್ಳಲು ಬಸವಣ ಕುಡಚಿ ಗ್ರಾಮದ ಹದ್ದಿಯಲ್ಲಿ ಬರುವ ಶಿಂದೊಳ್ಳಿ ಕ್ರಾಸ್ ಮತ್ತು ಬಸವನ ಕುಡಚಿ ಗ್ರಾಮದ ಹತ್ತಿರ ಇರುವ ಸರಾಯಿ ಅಂಗಡಿಯನ್ನು ಮಾ. 16 ಹಾಗೂ 17 ರಂದು ಮದ್ಯ ಮಾರಾಟದ ಅಂಗಡಿಗಳು, ಬಾರ್/ರೆಸ್ಟೋರೆಂಟ್‌ಗಳು, ಕ್ಲಬ್‌ಗಳು ಬಂದ್ ಇಡುವಂತೆ ಬೆಳಗಾವಿ ನಗರ ಪೊಲೀಸ್ ಆಯುಕ್ತರು ಬೊರಸೆ ಭೂಷಣ್ ಗುಲಾಬರಾವ್ ಅವರು ಆದೇಶ ಹೊರಡಿಸಿರುತ್ತಾರೆ.
ಸದರಿ ಆದೇಶವನ್ನು ಉಲ್ಲಂಘನೆ ಮಾಡಿದಲ್ಲಿ ಸಂಬಂಧಪಟ್ಟವರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಬೆಳಗಾವಿ ನಗರ ಪೊಲೀಸ್ ಆಯುಕ್ತರು ಬೊರಸೆ ಭೂಷಣ್ ಗುಲಾಬರಾವ್ ಹಾಗೂ ಹೆಚ್ಚುವರಿ ಜಿಲ್ಲಾ ದಂಡಾಧಿಕಾರಿಗಳು ಆದೇಶದಲ್ಲಿ ತಿಳಿಸಿರುತ್ತಾರೆ.




