Belagavi NewsBelgaum NewsKannada NewsUncategorized

ಶನಿವಾರ ಮದ್ಯ ಮಾರಾಟ ನಿಷೇಧ


ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ನಗರದಲ್ಲಿ ಮೊಹರಂ ಹಬ್ಬವನ್ನು ಜು.೨೯ ೨೦೨೩ ರಂದು ಆಚರಿಸಲಿರುವ ಹಿನ್ನಲೆಯಲ್ಲಿ ನಗರದಲ್ಲಿ ಯಾವುದೇ ಅಹೀತಕರ ಘಟನೆ ನಡೆಯದಂತೆ ಮುಂಜಾಗೃತಾ ಕ್ರಮವಾಗಿ ನಗರದಲ್ಲಿ ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡಿಕೊಳ್ಳುವ ಸಲುವಾಗಿ ಜು. ೨೮ ಬೆಳಿಗ್ಗೆ ೬ ಗಂಟೆಯಿಂದ ಜು. ೩೦ ಬೆಳಿಗ್ಗೆ ೬ ಗಂಟೆಯವರೆಗೆ ಮದ್ಯದ ಅಂಗಡಿ, ವೈನಶಾಪ್, ಬಾರ್‌ಗಳಲ್ಲಿ, ಕ್ಲಬ್‌ಗಳಲ್ಲಿ ಮತ್ತು ಹೊಟೇಲ್‌ಗಳಲ್ಲಿ ಮದ್ಯ ಮಾರಾಟ ಮತ್ತು ಮದ್ಯ ಸಾಗಣಿಕೆಯನ್ನು ನಿಷೇಧಿಸಿ ಬೆಳಗಾವಿ ನಗರ ಹೆಚ್ಚುವರಿ ಜಿಲ್ಲಾ ದಂಡಾಧಿಕಾರಿಗಳು ಹಾಗೂ ಪೊಲೀಸ್ ಆಯುಕ್ತರಾದ ಎಸ್. ಎನ್. ಸಿದ್ಧರಾಮಪ್ಪ ಅವರು ಆದೇಶ ಹೊರಡಿಸಿರುತ್ತಾರೆ.
ಮದ್ಯದ ಅಂಗಡಿಗಳನ್ನು ಹಾಗೂ ಕೆಎಸ್‌ಬಿಸಿಎಲ್ ಡಿಪೋಗಳನ್ನು,ಹೊಟೇಲ್‌ಗಳಲ್ಲಿರುವ ಬಾರ್‌ಗಳು ಹಾಗೂ ಎಲ್ಲ ಅಬಕಾರಿ ಸನ್ನದು ಅಂಗಡಿಗಳನ್ನು ಮುಚ್ಚಿ ಸೀಲ್ ಹಾಕತಕ್ಕದ್ದು, ಇದಲ್ಲದೇ ಪರಿಸ್ಥಿತಿಗೆ ಅನುಗುಣವಾಗಿ ಸಾರ್ವಜನಿಕ ಶಾಂತತೆಯನ್ನು ಕಾಯ್ದುಕೊಂಡು ಬರುವ ಹಿತದೃಷ್ಟಿಯಿಂದ ಅಬಕಾರಿ ಇನ್ಸ್‌ಪೆಕ್ಟರ್ ಹಾಗೂ ಉಪ ವಿಭಾಗ ಅಬಕಾರಿ ಅಧೀಕ್ಷಕರು, ಕರ್ನಾಟಕ ಅಬಕಾರಿ ಕಾಯ್ದೆ ೧೯೬೫ರ ಕಲಂ ೨೧(೨) ಹಾಗೂ ಕರ್ನಾಟಕ ಪೊಲೀಸ್ ಕಾಯ್ದೆ ೧೯೬೩ ಕಲಂ ೩೧ ರ ಪ್ರಕಾರ ಅವಶ್ಯಕತೆ ಕಂಡುಬಂದಲ್ಲಿ ಶಾಂತಿಪಾಲನೆಗಾಗಿ ಸೂಕ್ತ ಕ್ರಮ ಕೈಗೊಳ್ಳಲಾಗವುದು ಎಂದು ಆದೇಶದಲ್ಲಿ ತಿಳಿಸಲಾಗಿದೆ
ಆದೇಶವನ್ನು ಉಲ್ಲಂಘನೆ ಮಾಡಿದಲ್ಲಿ ಸಂಬಂಧಪಟ್ಟವರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಬೆಳಗಾವಿ ನಗರ ಹೆಚ್ಚುವರಿ ಜಿಲ್ಲಾ ದಂಡಾಧಿಕಾರಿಗಳು ಹಾಗೂ ಪೊಲೀಸ್ ಆಯುಕ್ತರಾದ ಎಸ್. ಎನ್. ಸಿದ್ಧರಾಮಪ್ಪ ಅವರು ಆದೇಶದಲ್ಲಿ ತಿಳಿಸಿದ್ದಾರೆ.


ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button