Belagavi NewsBelgaum NewsKannada NewsKarnataka News
*ಬೆಳಗಾವಿಯಲ್ಲಿ ಎರಡು ದಿನ ಮದ್ಯ ಮಾರಾಟ ನಿಷೇಧ: ಪೊಲೀಸ್ ಆಯುಕ್ತರಿಂದ ಆದೇಶ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ನವೆಂಬರ್ 1ರಂದು ನಗರದಲ್ಲಿ ಅದ್ಧೂರಿಯಾಗಿ ಕರ್ನಾಟಕ ರಾಜ್ಯೋತ್ಸವ ಆಚರಣೆಗೆ ಸಿದ್ಧತೆ ನಡೆಯುತ್ತಿದ್ದು, ಈ ಹಿನ್ನೆಲೆಯಲ್ಲಿ ನಗರದಲ್ಲಿ ಎರಡು ದಿನಗಳ ಕಾಲ ಮದ್ಯ ಮಾರಾಟ ನಿಷೇಧಿಸಿ ಪೊಲೀಸ್ ಆಯುಕ್ತ ಪ್ರಕಾಶ ನಿಕಮ್ ಆದೇಶ ಹೊರಡಿಸಿದ್ದಾರೆ.
ರಾಜ್ಯೋತ್ಸವದ ಅಂಗವಾಗಿ ವಿವಿಧ ಕನ್ನಡಪರ ಸಂಘಟನೆಗಳು ಹಾಗೂ ಜಿಲ್ಲಾಡಳಿತದ ಸಹಯೋಗದಲ್ಲಿ ನಗರದ ಪ್ರಮುಖ ರಸ್ತೆಗಳಲ್ಲಿ ರೂಪಕ ವಾಹನಗಳ ಮೆರವಣಿಗೆ ನಡೆಯಲಿದೆ. ಈ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕೆ ವಹಿಸಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ.
ಅದರಂತೆ ಅಕ್ಟೋಬರ್ 31ರ ಬೆಳಗ್ಗೆ 8 ಗಂಟೆಯಿಂದ ನವೆಂಬರ್ 2ರ ಬೆಳಗ್ಗೆ 6 ಗಂಟೆಯವರೆಗೆ ಮದ್ಯ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ.
ನಿಷೇಧಿತ ಅವಧಿಯಲ್ಲಿ ಆದೇಶ ಉಲ್ಲಂಘಿಸಿ ಮದ್ಯ ಮಾರಾಟ ಮಾಡುವವರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಪೊಲೀಸ್ ಆಯುಕ್ತ ಪ್ರಕಾಶ ನಿಕಮ್ ಎಚ್ಚರಿಕೆ ನೀಡಿದ್ದಾರೆ.




