ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಮೂರನೇ ಹಂತದ ಲಾಕ್ಡೌನ್ನಲ್ಲಿ ರಾಜ್ಯಾದ್ಯಂತ ಗ್ರೀನ್ ಹಾಗೂ ಆರೇಂಜ್ ಝೋನ್ ಗಳಲ್ಲಿ ಮದ್ಯದಂಗಡಿಗಳಲ್ಲಿ ಮದ್ಯ ಮಾರಾಟಕ್ಕೆ ಅವಕಾಶ ನೀಡಲಾಗಿದ್ದು, ಈ ನಡುವೆ ನಾಳೆಯಿಂದ ಲಾಡ್ಜ್, ಬಾರ್ ಮತ್ತು ಕ್ಲಬ್ಗಳಿಗೆ ಮದ್ಯ ಮಾರಾಟಕ್ಕೆ ಅನುಮತಿ ನೀಡಲಾಗುವುದು ಎಂದು ಅಬಕಾರಿ ಸಚಿವ ಹೆಚ್. ನಾಗೇಶ್ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಬೆಳಗ್ಗೆ 9ರಿಂದ ಸಂಜೆ 7ರವರೆಗೆ ಇಲ್ಲಿ ಮದ್ಯ ಮಾರಾಟ ಮಾಡಬಹುದು. ಆದರೆ, ಎಂಆರ್ಪಿ ಬೆಲೆಗೆ ಮಾತ್ರ ಮಾರಲು ಅನುಮತಿ ಇದೆ. ಹೆಚ್ಚಿನ ಬೆಲೆಗೆ ಮಾರಿದರೆ ಖಾಯಂ ಆಗಿ ಪರವಾನಿಗೆ ರದ್ದು ಮಾಡಲಾಗುವುದು ಎಂದು ಎಚ್ಚರಿಸಿದರು.
ಇದೇ ವೇಳೆ, ಆನ್ಲೈನ್ನಲ್ಲಿ ಮದ್ಯ ಮಾರಾಟಕ್ಕೆ ಅವಕಾಶ ನೀಡಿ ಸುಪ್ರೀಂ ಕೋರ್ಟ್ ತೀರ್ಪು ನೀಡಿರುವುದನ್ನುಸ್ವಾಗತಿಸಿದ ಸಚಿವರು ನನ್ನ ಅಭಿಪ್ರಾಯದಲ್ಲಿ ಆನ್ಲೈನ್ ಮಾರಾಟಕ್ಕೆ ಅವಕಾಶ ನೀಡಿದರೆ ತಪ್ಪಿಲ್ಲ. ಈ ಬಗ್ಗೆ ಮೊದಲಿಂದಲೂ ಚರ್ಚೆ ನಡೆದಿತ್ತು ಎಂದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ