Latest

11 ಗಂಟೆಗೆ ರಾಜಭವನದಿಂದ ನೂತನ ಸಚಿವರ ಪಟ್ಟಿ ಪ್ರಕಟ – ಬೊಮ್ಮಾಯಿ

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು – ಬುಧವಾರ ಮಧ್ಯಾಹ್ನ ಪ್ರಮಾಣ ವಚನ ಸ್ವೀಕರಿಸಲಿರುವ ನೂತನ ಸಚಿವರ ಪಟ್ಟಿ 11 ಗಂಟೆಗೆ ರಾಜಭವನದಿಂದ ಪ್ರಕಟವಾಗಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ನವದೆಹಲಿಯಿಂದ ಬೆಂಗಳೂರಿಗೆ ಬಂದಿಳಿದ ಬೊಮ್ಮಾಯಿ ಸುದ್ದಿಗಾರರಿಗೆ ಈ ವಿಷಯ ತಿಳಿಸಿದರು. 2 ದಿನ ದೆಹಲಿಯಲ್ಲಿದ್ದು ಸಚಿವರ ಪಟ್ಟಿಯನ್ನು ಅಂತಿಮಗೊಳಿಸಿಕೊಂಡು ಬರಲಾಗಿದೆ. ಇಂದು 11 ಗಂಟೆಯಿಂದ 11.30ಕ್ಕೆ ರಾಜಭವನದಿಂದಲೇ ಪಟ್ಟಿ ಬಿಡುಗಡೆಯಾಗಲಿದೆ ಎಂದು ತಿಳಿಸಿದರು.

ಮಧ್ಯಾಹ್ನ 2.15ಕ್ಕೆ ನೂತನ ಸಚಿವರ ಪ್ರಮಾಣ ವಚನ ಕಾರ್ಯಕ್ರಮ ನಡೆಯಲಿದ್ದು, ಈಗಾಗಲೆ ಸಂಬಂಧಿಸಿದವರಿಗೆ ಮಾಹಿತಿ ನೀಡಲಾಗಿದೆ.

Breaking news – ಫೈನಲ್ ಆಗಬೇಕಿರುವ 2 -3 ವಿಚಾರ ಬಹಿರಂಗ ಪಡಿಸಿದ ಎಂದ ಬೊಮ್ಮಾಯಿ (ವಿಡಿಯೋ ಸಹಿತ)

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button