Kannada NewsKarnataka NewsLatest

*ಹಿರಿಯ ಲೇಖಕ, ಪತ್ರಕರ್ತ ಜಿ.ಎನ್. ರಂಗನಾಥ ರಾವ್ ಇನ್ನಿಲ್ಲ; ಸಿಎಂ ಸಿದ್ದರಾಮಯ್ಯ ಕಂಬನಿ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಹಿರಿಯ ಲೇಖಕ, ಪತ್ರಕರ್ತ ಜಿ.ಎನ್. ರಂಗನಾಥ ರಾವ್ ಅವರ ನಿಧನದ ಸುದ್ದಿ ಆಘಾತವುಂಟುಮಾಡಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸಂತಾಪ ವ್ಯಕ್ತಪಡಿಸಿದ್ದಾರೆ.

ಪ್ರಜಾವಾಣಿ ದಿನಪತ್ರಿಕೆಯ ಕಾರ್ಯನಿರ್ವಾಹಕ ಸಂಪಾದಕರಾಗಿ ಕಾರ್ಯನಿರ್ವಹಿಸುವುದರ ಜೊತೆಗೆ ಸಾಹಿತ್ಯ ಕ್ಷೇತ್ರದಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡು ನಾಡು ನುಡಿಯ ಉನ್ನತಿಗಾಗಿ ದುಡಿದಿದ್ದರು. ರಂಗನಾಥ ರಾವ್ ಅವರ ಅಗಲಿಕೆ ನಾಡಿನ ಪತ್ರಿಕಾರಂಗ ಮತ್ತು ಸಾಹಿತ್ಯ ಕ್ಷೇತ್ರಕ್ಕೆ ತುಂಬಿಬಾರದ ನಷ್ಟ.

ಮೃತರ ಆತ್ಮಕ್ಕೆ ಶಾಂತಿ ಮತ್ತು ಅವರ ಅಗಲಿಕೆಯ ದುಃಖ ಭರಿಸುವ ಶಕ್ತಿಯನ್ನು ಕುಟುಂಬವರ್ಗಕ್ಕೆ ದೇವರು ಕರುಣಿಸಲೆಂದು ಪ್ರಾರ್ಥಿಸುತ್ತೇನೆ ಎಂದು ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.


Home add -Advt

Related Articles

Back to top button