Kannada NewsKarnataka NewsLatest

*ಬುದ್ಧಿಜೀವಿಗಳಿಗೆ ಬೆದರಿಕೆ ಪತ್ರ; ಗೃಹ ಸಚಿವರು ಹೇಳಿದ್ದೇನು?*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಪ್ರಗತಿಪರ ಚಿಂತಕರು, ಲೇಖಕರು, ಸಾಹಿತಿಗಳು, ಬುದ್ದಿಜೀವಿಗಳಿಗೆ ಬೆದರಿಕೆ ಪತ್ರ ಬಂದಿದ್ದು, ನಿಮ್ಮನ್ನು ಹತ್ಯೆ ಮಾಡುವುದಾಗಿ ಹೆದರಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಭೇಟಿಗೆ ಬುದ್ಧಿಜೀವಿಗಳು ಮುಂದಾಗಿದ್ದಾರೆ.

ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಗೃಹ ಸಚಿವ ಪರಮೇಶ್ವರ್, ಪ್ರಗತಿಪರರು, ಸಾಹಿತಿಗಳಿಗೆ ಅಪರಿಚಿತರಿಂದ ಜೀವ ಬೆದರಿಕೆ ಪತ್ರ ಬಂದಿರುವುದಾಗಿ ತಿಳಿಸಿದ್ದಾರೆ. ಕೆಲ ಸಾಹಿತಿಗಳು ನನ್ನ ಭೇಟಿಗೆ ಸಮಯ ಕೇಳಿದ್ದಾರೆ. ಈ ನಿಟ್ಟಿನಲ್ಲಿ ಶೀಘ್ರದಲ್ಲಿ ಅವರ ಭೇಟಿ ಮಾಡುತ್ತೇನೆ ಎಂದರು.

ಸಾಹಿತಿಗಳು ಬುದ್ಧಿಜೀವಿಗಳಿಗೆ ಬಂದ ಬೆದರಿಕೆ ಪತ್ರವನ್ನು ಡಿಜಿಪಿಗೆ ಕಳುಹಿಸಿ ಕೊಡುತ್ತೇನೆ. ಎಂ.ಎಂ.ಕಲಬುರ್ಗಿ, ಗೌರಿ ಲಂಕೇಶ್ ಹತ್ಯೆಯನ್ನು ನಾವಿನ್ನೂ ಮರೆತಿಲ್ಲ. ಅಂತಹ ಸಂದರ್ಭದಲ್ಲಿ ಮತ್ತೆ ಬೆದರಿಕೆ ಬಂದಿದೆ ಎಂದರೆ ಇದನ್ನು ಗಂಭೀರವಾಗಿ ಪರಿಗಣಿಸಲಾಗುವುದು ಎಂದು ಹೇಳಿದರು.

ಈಗಾಗಲೇ ಕಮಿಷ್ನರ್, ಡಿಜಿಪಿಗೆ ರಕ್ಷಣೆ ನೀಡುವಂತೆ ಸೂಚನೆ ನೀಡಿದ್ದೇನೆ ಎಂದು ತಿಳಿಸಿದರು.

Home add -Advt

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button