Kannada NewsLatestUncategorized

*ಕಾಂಗ್ರೆಸ್ ಅಭ್ಯರ್ಥಿಗಳ ಮೇಲೆ ಇನ್ನೆರಡು ದಿನದಲ್ಲಿ IT, ಲೋಕಾ ದಾಳಿ ಸುಳಿವು; ಬಿಜೆಪಿಯಿಂದ ವಿಪಕ್ಷಗಳನ್ನು ಹೆದರಿಸುವ ಹುನ್ನಾರ; ಲಕ್ಷ್ಮಿ ಹೆಬ್ಬಾಳ್ಕರ್ ಆರೋಪ*

ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ವಿಧಾನಸಭಾ ಚುನಾವಣೆಗೆ ಕೇವಲ ಹತ್ತು ದಿನಗಳು ಮಾತ್ರ ಬಾಕಿಯಿದೆ. ಈ ಬಾರಿ ರಾಜ್ಯದಲ್ಲಿ ಕಾಂಗ್ರೆಸ್ ಪರವಾದ ಅಲೆಯಿದ್ದು, ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುವುದು ಖಚಿತ ಎಂದು ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದ್ದಾರೆ.

ಬೆಳಗಾವಿಯಲ್ಲಿ ದಿಢೀರ್ ಸುದ್ದಿಗೋಷ್ಠಿ ಕರೆದ ಲಕ್ಷ್ಮೀ ಹೆಬ್ಬಾಳ್ಕರ್, ಬಿಜೆಪಿಯವರು ಕಾಂಗ್ರೆಸ್, ಜೆಡಿಎಸ್ ಮುಖಂಡರ ಮೇಲೆ ಐಟಿ, ಲೋಕಾಯುಕ್ತ ದಾಳಿ ನಡೆಸುತ್ತಿದ್ದಾರೆ. ರಾಜ್ಯದಲ್ಲಿ ಬಿಜೆಪಿ ವಾಮಮಾರ್ಗ ಹಿಡಿಯುವ ಸುದ್ದಿಯಿದೆ. 50 ಅಭ್ಯರ್ಥಿಗಳು, ಅವರ ಸಂಬಂಧಿಕರ ಮೇಲೆ ಲೋಕಾಯುಕ್ತ ದಾಳಿ ನಡೆಸಲು ಸಿದ್ಧತೆ ನಡೆದಿದೆ ಎಂಬ ಮಾಹಿತಿ ಇದೆ ಎಂದರು.

Home add -Advt

ಇನ್ನೆರಡು ದಿನದಲ್ಲಿ ದಾಳಿಯಾಗುವ ಸಾಧ್ಯತೆ ಇದೆ ದೇಶದಲ್ಲಿ ಯಾವುದೇ ರಾಜ್ಯದಲ್ಲಿ ಚುನಾವಣೆ ಸಂದರ್ಭದಲ್ಲಿ ಈ ರೀತಿ ವಿಪಕ್ಷಗಳನ್ನು ಹೆದರಿಸುವುದು ಸಾಮಾನ್ಯ. ಅವರು ಏನು ಮಾಡುತ್ತಾರೋ ಅದೇ ಅವರಿಗೆ ತಿರುಗುಬಾಣವಾಗಲಿದೆ ಎಂದು ಹೇಳಿದ್ದಾರೆ.

https://pragati.taskdun.com/karnatakarain-updateimd-7/

Related Articles

Back to top button