Belagavi NewsBelgaum NewsKannada NewsKarnataka NewsLatestPolitics

*ಲೋಡ್ ಶೆಡ್ಡಿಂಗ್: ಸರ್ಕಾರದ ವಿರುದ್ಧ ಪ್ರತಿಭಟನೆಗೆ ಕರೆಕೊಟ್ಟ ಸಂಸದ ಅಣ್ಣಾಸಾಹೇಬ ಜೊಲ್ಲೆ*

5 ಗ್ಯಾರಂಟಿಯಲ್ಲೇ ಮೈಮರೆತು ಕುಳಿತ ಕಾಂಗ್ರೆಸ್ ಸರ್ಕಾರ ಎಂದು ಆಕ್ರೋಶ

ಪ್ರಗತಿವಾಹಿನಿ ಸುದ್ದಿ; ಚಿಕ್ಕೋಡಿ: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರದ ಚುಕ್ಕಾಣಿ ಹಿಡಿದಾಗಿನಿಂದ ವಿದ್ಯುತ್ ಕಣ್ಣಾಮುಚ್ಚಾಲೆಯಿಂದ ರೈತರು ತೊಂದರೆ ಪಡುವಂತಾಗಿದೆ. ಸಮರ್ಪಕ ವಿದ್ಯುತ್ ಪೂರೈಕೆಗೆ ಆಗ್ರಹಿಸಿ ಚಿಕ್ಕೋಡಿ ಲೋಕಸಭಾ ವ್ಯಾಪ್ತಿಯ ಎಲ್ಲ ರೈತರು ಸೋಮವಾರ ಅ.16ರಂದು ಬೃಹತ್ ಪ್ರತಿಭಟನೆ ನಡೆಸಲು ಸಂಸದ ಅಣ್ಣಾಸಾಹೇಬ ಜೊಲ್ಲೆ ಕರೆ ನೀಡಿದ್ದಾರೆ.

ಅಂದು ಬೆಳಿಗ್ಗೆ 10 ಗಂಟೆಗೆ ಚಿಕ್ಕೋಡಿಯಲ್ಲಿ ಸರ್ಕಾರದ ವಿರುದ್ಧ ರೈತರಿಂದ ಬ್ರಹತ್ ಪ್ರತಿಭಟನೆ ನಡೆಯಲಿದೆ. ಈಗಾಗಲೇ ಅಲ್ಪ ಸ್ವಲ್ಪ ಮಳೆಯಿಂದ ಬೆಳೆದ ಬೆಳೆಯನ್ನು ಉಳಿಸಿಕೊಳ್ಳಲು ಸಮರ್ಪಕವಾಗಿ ವಿದ್ಯುತ್ ಪೂರೈಕೆ ಇಲ್ಲದೇ ಇರುವುದರಿಂದ ಕೊಳವೆಬಾವಿ, ಬಾವಿಯಲ್ಲಿ ನೀರಿದ್ದರೂ ಜನರಿಗೆ, ದನ ಕರುಗಳಿಗೆ ಕುಡಿಯಲು, ಬೆಳೆಗೆ ನೀರು ಹಾಯಿಸಲಾಗದ ಪರಿಸ್ಥಿತಿ ಅನ್ನದಾತರದ್ದಾಗಿದೆ.

Home add -Advt

ಆದರಲ್ಲೂ ಕಳೆದ 15 ದಿನಗಳಿಂದ ವಿದ್ಯುತ್ ಕಣ್ಣಾಮುಚ್ಚಾಲೆ ವಿಪರೀತವಾಗಿದ್ದು, ಬೆಳೆ ಬಾಡಿ ಹೋಗುತ್ತಿದೆ. 5 ಗ್ಯಾರಂಟಿಗಳನ್ನು ನೀಡುವಲ್ಲಿ ಕಾಂಗ್ರೆಸ್ ಸರ್ಕಾರ ಮೈರೆತು ಕುಳಿತಿದ್ದು, ಇನ್ನುಳಿದ ಸಮಸ್ಯೆಗಳ ಕುರಿತು ಕಾಂಗ್ರೆಸ್ ಸರ್ಕಾರ ಖ್ಯಾರೆ ಎನ್ನುತ್ತಿಲ್ಲ ಎಂದು ರಾಜ್ಯ ಸರ್ಕಾರದ ವಿರುದ್ಧ ಸಂಸದ ಅಣ್ಣಾಸಾಹೇಬ ಜೊಲ್ಲೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Related Articles

Back to top button