Kannada NewsNationalPolitics

*ಲೋಕಸಭಾ ಚುನಾವಣೆ: ಬಿಜೆಪಿಯಿಂದ 195 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ*

ಪ್ರಗತಿವಾಹಿನಿ ಸುದ್ದಿ: ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ರಾಜ್ಯಕೀಯ ಪಕ್ಷಗಳು ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡುತ್ತಿದೆ. ಬಿಜೆಪಿ ಹೈಕಮಾಂಡ್ 195 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದೆ.

ಮೊದಲ ಪಟ್ಟಿಯಲ್ಲಿ 34 ಕೇಂದ್ರ ಸಚಿವರಿಗೆ, 28 ಮಹಿಳೆಯರಿಗೆ ಟಿಕೆಟ್ ಘೋಷಣೆ ಮಾಡಲಾಗಿದೆ. ಆದರೆ ಈ ಪಟ್ಟಿಯಲ್ಲಿ ಕರ್ನಾಟಕದ ಯಾರಿಗೂ ಟಿಕೆಟ್ ನೀಡಲಾಗಿಲ್ಲ.

ಪ್ರಧಾನಿ ನರೇಂದ್ರ ಮೋದಿ ವಾರಣಾಸಿಯಿಂದ, ಗೃಹ ಸಚಿವ ಅಮಿತ್ ಶಾ ಗಾಂಧಿನಗರದಿಂದ, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಲಖನೌ ನಿಂದ ಸ್ಪರ್ಧಿಸಲಿದ್ದಾರೆ.

ಉತ್ತರ ಪ್ರದೇಶದ 51 ಕ್ಷೇತ್ರಗಳು, ಪಶ್ಚಿಮ ಬಂಗಾಳದ 20 ಕ್ಷೇತ್ರಗಳು, ಗುಜರಾತ್ ನ 15, ರಾಜಸ್ಥಾನದ 15, ಕೇರಳ 12, ತೆಲಂಗಾಣ 9, ಅಸ್ಸಾಂ 11, ಜಾರ್ಖಂಡ್ 11, ದೆಹಲಿ 5, ಉತ್ತರಾಖಂಡ್ 3, ಗೋವಾ 1, ತ್ರಿಪುರಾ 1, ಅಂಡಮಾನ್ ನಿಕೋಬಾರ್ 1 ಕ್ಷೇತ್ರಕ್ಕೆ ಅಭ್ಯರ್ಥಿ ಘೋಷಿಸಲಾಗಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button