ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – ಡಿ.ದೇವರಾಜ ಅರಸು ಅಭಿವೃದ್ಧಿ ನಿಗಮ; ಕರ್ನಾಟಕ ಉಪ್ಪಾರ ಅಭಿವೃದ್ದಿ ನಿಗಮ, ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮಗಳು ವಿವಿಧ ಸಾಲ ಸೌಲಭ್ಯಗಳಿಗೆ ಅರ್ಜಿ ಆಹ್ವಾನಿಸಿವೆ.
ಇಲ್ಲಿರುವ ಲಿಂಕ್ ಗಳನ್ನು ಕ್ಲಿಕ್ ಮಾಡಿ ಹೆಚ್ಚಿನ ಮಾಹಿತಿ ಪಡೆದು ಅರ್ಜಿ ಸಲ್ಲಿಸಬಹುದು.
ಡಿ.ದೇವರಾಜ ಅರಸು ಅಭಿವೃದ್ಧಿ ನಿಗಮ-
ಸ್ವಯಂ ಉದ್ಯೋಗ ವೈಯಕ್ತಿಕ ಸಾಲ ಯೋಜನೆ ಸೌಲಭ್ಯ ಪಡೆಯಲು ಸ್ವಯಂ ಉದೋಗಕ್ಕಾಗಿ ಆರ್ಥಿಕ ಚಟುವಟಿಕೆ ಕೈಗೊಳ್ಳಲು ಗರಿಷ್ಠ ೨ ಲಕ್ಷ ರೂ. ವರೆಗೆ ಆರ್ಥಿಕ ನೆರವು, ಗರಿಷ್ಠ ಶೇ. ೧೫ ರಷ್ಟು ಸಹಾಯಧನ ಉಳಿಕೆ ಮೊತ್ತ ವಾರ್ಷಿಕ ಶೇ.೪ರ ಬಡ್ಡಿದರದಲ್ಲಿ ಸಾಲ ಸೌಲಭ್ಯ ಪಡೆಯಲು ಹಿಂದುಳಿದ ವರ್ಗಗಳ ಪ್ರವರ್ಗ-೧, ೨ಎ, ೩ಎ ಮತ್ತು ೩ಬಿಗೆ ಸೇರಿದ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
(ವಿಶ್ವಕರ್ಮ, ಉಪ್ಪಾರ, ಅಂಬಿಗ, ಸವಿತಾ, ಮಡಿವಾಳ, ಅಲೆಮಾರಿ ಮತ್ತು ಅರೆಅಲೆಮಾರಿ ಸಮುದಾಯ ಒಕ್ಕಲಿಗ, ಲಿಂಗಾಯತ, ಕಾಡುಗೊಲ್ಲ, ಹಟ್ಟಿಗೊಲ್ಲ, ಮರಾಠ ಮತ್ತು ಇದರ ಉಪಸಮುದಾಯಗಳು ಹೊರತುಪಡಿಸಿ)
ಕುಟುಂಬದ ವಾರ್ಷಿಕ ವರಮಾನ ಗ್ರಾಮಂತರ ಪ್ರದೇಶದವರಿಗೆ ೯೮,೦೦೦ ರೂ.ಗಳು, ಪಟ್ಟಣ ಪ್ರದೇಶದವರಿಗೆ ೧,೨೦,೦೦೦ ರೂ.ಗಳ ಒಳಗಿರಬೇಕು. ಅರ್ಜಿದಾರರ ವಯಸ್ಸು ೧೮ ರಿಂದ ೫೫ ವರ್ಷಗಳ ಮಿತಿಯಲ್ಲಿರಬೇಕು. ಈ ಯೋಜನೆಯಡಿಯಲ್ಲಿ ಸೌಲಭ್ಯ ಒದಗಿಸಲು ಸುವಿಧಾ ತಂತ್ರಾಂಶದಲ್ಲಿ ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.
ಅರ್ಜಿ ಸಲ್ಲಿಸುವಾಗ ಅರ್ಜಿದಾರರು ಆಧಾರ ಜೋಡಣೆಯಾದ ಚಾಲ್ತಿಯಲ್ಲಿರುವ ಬ್ಯಾಂಕ್ ಖಾತೆ ಹೊಂದಿರಬೇಕು. ಆಧಾರ ಕಾರ್ಡನಲ್ಲಿರುವಂತೆ ಅರ್ಜಿದಾರರ ಹೆಸರು (ಶ್ರೀ/ಶ್ರೀಮತಿ ಕುಮಾರಿ ಮುಂತಾದ ಮಾಹಿತಿಗಳೆಲ್ಲವೂ) ಇತರೆ ದಾಖಲಾತಿಗಳಾದ ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಬ್ಯಾಂಕ್ ಪಾಸ ಪುಸ್ತಕದಲ್ಲಿಯೂ ಇದ್ದು ಹೊಂದಾಣಿಕೆಯಾಗಿರಬೇಕು.
ಒಂದು ಬಾರಿ ನಿಗಮದ ಯಾವುದಾದರೂ ಯೋಜನೆಯಲ್ಲಿ ಪ್ರಯೋಜನ ಪಡೆದಿದ್ದಲ್ಲಿ ಅಂತಹವರು ಹಾಗೂ ಅವರ ಕುಟುಂಬದವರು ಮತ್ತೊಮ್ಮೆ ಸೌಲಭ್ಯ ಕೋರಿ ಅರ್ಜಿ ಸಲ್ಲಿಸಲು ಅರ್ಹರಿರುವುದಿಲ್ಲ. ಯೋಜನೆಗಳಲ್ಲಿ ಸೌಲಭ್ಯ ಪಡೆಯಲು ಇಚ್ಚಿಸುವ ಅರ್ಜಿದಾರರು https://suvidha.karnataka.gov.in ಜಾಲತಾಣದೊಂದಿಗೆ ಅರ್ಜಿಯನ್ನು ಸಲ್ಲಿಸಬಹುದು ಹಾಗೂ ನಿಗಮದ ವೆಬ್‌ಸೈಟ್ https://dbcdc.karnataka.gov.in ನಲ್ಲಿ ಇಲ್ಲಿ ಸಂಪರ್ಕಿಸಿ ಹೆಚ್ಚಿನ ಮಾಹಿತಿ ಪಡೆಯಬಹುದಾಗಿರುತ್ತದೆ.
ಹೆಚ್ಚಿನ ಮಾಹಿತಿಯನ್ನು ಪಡೆಯಲು ನಿಗಮದ ಸಹಾಯವಾಣಿ ಸಂಖ್ಯೆ: ೯೬೬೦೬೦೬೬೩೮೯ ಹಾಗೂ ಬೆಳಗಾವಿ ಜಿಲ್ಲೆ ವ್ಯವಸ್ಥಾಪಕರ ಕಛೇರಿಯ ದೂರವಾಣಿ ಸಂಖ್ಯೆ:-೦೮೩೧-೨೪೦೨೧೬೩ ಸಂಪರ್ಕಿಸಬಹುದಾಗಿದೆ. ಆನ್ ಲೈನ್ ಮೂಲಕ ಭರ್ತಿ ಮಾಡಿದ ಅರ್ಜಿಗಳನ್ನು ಅಗತ್ಯ ದಾಖಲಾತಿಗಳೊಂದಿಗೆ ಅಗಷ್ಟ ೨೪ ರೂಳಗೆ ಸುವಿಧಾ ತಂತ್ರಾಂಶದ ಮುಖಾಂತರ ಸಲ್ಲಿಸುವುದು.
sಸೂಚನೆ:- ಆನ್‌ಲೈನ್ ಮುಖಾಂತರ ಅರ್ಜಿ ಸಲ್ಲಿಸಲು ಯಾವುದೇ ಶುಲ್ಕ ಪಾವತಿಸುವಂತಿಲ್ಲ ಸಂಬಂಧಪಟ್ಟ ಜಿಲ್ಲೆಗಳ ಜಿಲ್ಲಾ ವ್ಯವಸ್ಥಾಪಕರ ಕಛೇರಿ ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಕಛೇರಿಯ ಅವಧಿಯಲ್ಲಿ ಉಚಿತವಾಗಿ ಆನ್‌ಲೈನ್ ಅರ್ಜಿ ಸಲ್ಲಿಸುವ ವ್ಯವಸ್ಥೆ ಇರುತ್ತದೆ ಎಂದು ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ಕರ್ನಾಟಕ ಉಪ್ಪಾರ ಅಭಿವೃದ್ದಿ ನಿಗಮ –
೨೦೨೨-೨೩ನೇ ಸಾಲಿನಲ್ಲಿ ಕರ್ನಾಟಕ ಉಪ್ಪಾರ ಅಭಿವೃದ್ದಿ ನಿಗಮದ ವತಿಯಿಂದ ಅನುಷ್ಠಾನಗೊಳಿಸುತ್ತಿರುವ ಪ್ರವರ್ಗ-೧ರಡಿಯಲ್ಲಿ ಬರುವ ಕ್ರಮ ಸಂಖ್ಯೆ: ೫೩(ಎ) ಯಿಂದ ೫೩(ವಿ)ವರೆಗಿನ ಉಪ್ಪಾರ ಮತ್ತು ಇದರ ಉಪಜಾತಿಗೆ ಸೇರಿದ ಜನರ ಆರ್ಥಿಕ ಅಭಿವೃದ್ಧಿಗಾಗಿ ಸಾಲ ಮತ್ತು ಸಹಾಯಧನ ಸೌಲಭ್ಯ ಪಡೆಯ ಬಯಸುವ ಫಲಾನುಭವಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಯೋಜನೆಗಳ ವಿವರ : ಸ್ವಯಂ ಉದ್ಯೋಗ ನೇರ ಸಾಲ ಯೋಜನೆ, ೨೦೨೨-೨೩ನೇ ಸಾಲಿನ ಅರಿವು ಶೈಕ್ಷಣಿಕ ಸಾಲ (ನವೀಕರಣ) (೨೦೧೯-೨೦ನೇ ಸಾಲಿನ ೪ನೇ ಕಂತು ಹಾಗೂ ೨೦೨೦-೨೧ನೇ ಸಾಲಿನ ೩ನೇ ಕಂತು).
ಯೋಜನೆಯ ಸಾಮಾನ್ಯ ಅರ್ಹತೆಗಳು ಮತ್ತು ನಿಬಂಧನೆಗಳು :
ಅರ್ಜಿದಾರರು ಬೆಳಗಾವಿ ಜಿಲ್ಲೆಯ ಖಾಯಂ ನಿವಾಸಿಯಾಗಿರಬೇಕು. ಕೇಂದ್ರ ಆಧಾರ್ ಅಧಿನಿಯಮ, ೨೦೧೬ ಸೆಕ್ಷನ್ (೭)ರಡಿ ಆಧಾರ ಕಾರ್ಡ್ ಕಡ್ಡಾಯವಾಗಿರುತ್ತದೆ. ಅರ್ಜಿದಾರರ ಹೆಸರು, ಆಧಾರ್ ಕಾರ್ಡ್, ಜಾತಿ/ ಆದಾಯ ಪ್ರಮಾಣ ಪತ್ರ ಮತ್ತು ಬ್ಯಾಂಕ್ ಖಾತೆಗಳಲ್ಲಿ ಹೊಂದಾಣಿಕೆ ಆಗಿರಬೇಕು. ಚಾಲ್ತಿಯಲ್ಲಿರುವ ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಕಡ್ಡಾಯವಾಗಿರುತ್ತದೆ. ನಿಗಮದ / ಸರ್ಕಾರದ ಯಾವುದಾದರೂ ಯೋಜನೆಗಳಡಿ ಈ ಹಿಂದೆ ಸೌಲಭ್ಯ ಪಡೆದಿರಬಾರದು. ಕುಟುಂಬದ ಒಬ್ಬರಿಗೆ ಮಾತ್ರ ಸೌಲಭ್ಯ ಒದಗಿಸಲಾಗುವುದು. ಸರ್ಕಾರ / ನಿಗಮವು ಕಾಲಕಾಲಕ್ಕೆ ವಿಧಿಸುವ ಇನ್ನಿತರ ಅರ್ಹತೆ /ನಿಬಂಧನೆಗಳನ್ನು ಹೊಂದಿದವರಾಗಿರಬೇಕು.
ವಿಶೇಷ ಸೂಚನೆ :
ಅನುಧಾನ ಲಭ್ಯತೆ ಅನುಗುಣವಾಗಿ ಯೋಜನೆಯನ್ನು / ಸೌಲಭ್ಯವನ್ನು ಜಾರಿಗೊಳಿಸುವದು. ಯೋಜನೆಗಳ ಮಾರ್ಗಸೂಚಿಯಲ್ಲಿ ಯಾವುದೇ ಬದಲಾವಣೆಗಳಾದಲ್ಲಿ ಆ ದಿನಾಂಕದಿಂದ ಜಾರಿಗೆ ಬರುವಂತೆ ಯೋಜನೆಯನ್ನು ಜಾರಿಗೊಳಿಸಲಾಗುವುದು. . http://suvidha.karnataka.gov.in ತಂತ್ರಾಂಶದ ಮೂಲಕ ಮಾತ್ರವೇ ಅರ್ಜಿಗಳನ್ನು ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಯನ್ನು ಬೆಳಗಾವಿ ಜಿಲ್ಲೆಯಲ್ಲಿರುವ ಕರ್ನಾಟಕ ಉಪ್ಪಾರ ಅಭಿವೃದ್ಧಿ ನಿಗಮ. ನಿ / ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಕಚೇರಿಯ ಸಹಾಯವಾಣಿ ಸಂಖ್ಯೆ:೦೮೩೧-೨೪೦೨೧೬೩. / ನಿಗಮದ ವೆಬ್‌ಸೈಟ್ http://uppardevelopment.karnataka.gov.in ರಲ್ಲಿ ಪಡೆಯಬಹುದಾಗಿದೆ.
ನಿಗಮದ ಸಹಾಯವಾಣಿ ಸಂಖ್ಯೆ : ೭೦೨೬೨೮೮೮೮೮ ಗೆ ಬೆಳಿಗ್ಗೆ ೧೦ ಗಂಟೆಯಿಂದ ಸಂಜೆ ೫:೩೦ ಗಂಟೆಯವರೆಗೆ ಸಂಪರ್ಕಿಸಬಹುದಾಗಿದೆ.
ಸುವಿಧಾ ತಂತ್ರಾಂಶದ ಮೂಲಕ ಅರ್ಜಿಗಳನ್ನು ಅಗಷ್ಟ ೧೨ ರ ಸಂಜೆ ೫:೩೦ ಗಂಟೆಯವರೆಗೆ ಅರ್ಜಿಗಳನ್ನು ಸಲ್ಲಿಸಬಹುದು ಎಂದು ಉಪ್ಪಾರ ಅಭಿವೃದ್ದಿ ನಿಗಮ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮ:
. ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮದಿಂದ ೨೦೨೨-೨೩ನೇ ಸಾಲಿನಲ್ಲಿ ಸಾಲ ಸೌಲಭ್ಯ ಒದಗಿಸಲು ಅರ್ಜಿಗಳನ್ನು ಆನ್‌ಲೈನ್ ಮೂಲಕ ಆಹ್ವಾನಿಸಲಾಗಿದೆ
ಸಾಮನ್ಯ ಅರ್ಹತೆಗಳು:-
ಅರ್ಜಿದಾರರು ಬೆಳಗಾವಿ ಜಿಲ್ಲೆಯ ಖಾಯಂ ನಿವಾಸಿಯಾಗಿರಬೇಕು. ನಿಗಮದ ಯೋಜನೆಗಳಲ್ಲಿ ಸೌಲಭ್ಯಗಳನ್ನು ಪಡೆಯಲು ಇಚ್ಛಸುವವರು ಸರ್ಕಾರದ ಆದೇಶ ಸಂಖ್ಯೆ:ಸಕಇ/೨೨೫/ಬಿಸಿಎ/೨೦೦೦ ದಿನಾಂಕ:೩೦-೦೩-೨೦೦೨ರನ್ವಯ ವಿಶ್ವಕರ್ಮ ಸಮುದಾಯ ಹಾಗೂ ಅದರ ಉಪಜಾತಿಗಳಗೆ ಸೇರಿರಬೇಕು. ಚಾಲ್ತಿಯಲ್ಲಿರುವ ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಕಡ್ಡಾಯವಾಗಿರಬೇಕು.
ವಯೋಮಿತಿ ೧೮ ವರ್ಷಗಳಿಂದ ೫೫ ವರ್ಷಗಳ ಮಿತಿಯಲ್ಲಿರುಬೇಕು.ನಿಗಮ / ಸರ್ಕಾರದ ಯಾವುದಾದರೂ ಯೋಜನೆಗಳಡಿ ಈ ಹಿಂದೆ ಸೌಲಭ್ಯ ಪಡೆದಿರಬಾರದು. ಕುಟುಂಬದ ಒಬ್ಬರಿಗೆ ಮಾತ್ರ ಸೌಲಭ್ಯ ಒದಗಿಸಲಾಗುವುದ. ಅರಿವು ಯೋಜನೆಯಡಿ ವಯೋಮಿತಿ ೧೮ ವರ್ಷಗಳಿಂದ ೩೦ ವರ್ಷಗಳ ಮಿತಿಯಲ್ಲಿರಬೇಕು.
ರಾಜ್ಯ ಸರ್ಕಾರದ / ನಿಗಮದ ಆನ್‌ಲೈನ್ ಮೂಲಕ ಅರ್ಜಿ ಸ್ವೀಕರಿಸುವ ಯೋಜನೆಗಳ ವಿವರ:
ಪಂಚವೃತ್ತಿ ಅಭಿವೃದ್ಧಿಗಾಗಿ ಆರ್ಥಿಕ ನೆರವು. ಸ್ವಯಂ ಉದ್ಯೋಗ ನೇರ ಸಾಲ ಯೋಜನೆಗಳಿಗೆ ಕುಟುಂಬದ ವಾರ್ಷಿಕ ವರಮಾನ ಗ್ರಾಮಂತರ ಪ್ರದೇಶದವರೆಗೆ ರೂ.೪೦,೦೦೦/- ಹಾಗೂ ಪಟ್ಟಣ ಪ್ರದೇಶದವರಿಗೆ ರೂ. ೫೫,೦೦೦/- ಗಳಿಗಿಂತ ಕಡಿಮೆ ಇರಬೇಕು. ಅರಿವು ಶೈಕ್ಷಣಿಕ ನೇರ ಸಾಲ ಯೋಜನೆ (ನವೀಕರಣ) ಅರಿವು ಯೋಜನೆಗಳಿಗೆ ವಾರ್ಷಿಕ ವರಮಾನವು ರೂ. ೩.೫೦ ಲಕ್ಷಗಳ ಮಿತಿಯೊಳಗಿರಬೇಕು.
ಅರ್ಜಿ ಸಲ್ಲಿಸುವಾಗ ಅರ್ಜಿದಾರರು ಕಡ್ಡಾಯವಾಗಿ ಆದಾರ ಜೋಡನೆಯಾದ ಚಾಲ್ತಿಯಲ್ಲಿರುವ ಬ್ಯಾಂಕ್ ಖಾತೆ ಹೊಂದಿರಬೇಕು. ಆಧಾರ ಕಾರ್ಡ್‌ನಲ್ಲಿರುವಂತೆ ಅರ್ಜಿದಾರರ ಹೆಸರು / ವಿಳಾಸ / ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಮತ್ತು ಬ್ಯಾಂಕ್ ಪಾಸ ಪುಸ್ತಕಗಳಲ್ಲಿ ತಾಳೆಯಾಗಬೇಕು. (ಶ್ರೀ/ ಶ್ರೀಮತಿ/ ಕುಮಾರಿ ಮುಂತಾದ ಮಾಹಿತಿಗಳು).
ಬೆಂಗಳೂರು -ಓನ್ / ಕರ್ನಾಟಕ-ಓನ್/ಅಟಲ್-ಜಿ ಜನಸ್ನೇಹಿ ಕೇಂದ್ರ ಮತ್ತು ನಾಗರಿಕ ಸೇವ ಕೇಂದ್ರಗಳಲ್ಲಿ ಆನ್‌ಲೈನ್ ಮೂಲಕ ಅರ್ಜಿ ನಮೂನೆಯನ್ನು ಸಲ್ಲಿಸಲು ತಿಳಿಸಿದೆ.
ಹೆಚ್ಚಿನ ಮಾಹಿತಿಯನ್ನು ನಿಗಮದ ವೆಬ್‌ಸೈಟ್ : http://www.kvcdcl.karnataka.gov.in ರಲ್ಲಿ ಪಡೆಯಬಹುದಾದ ನಿಗಮದ ಬೆಳಗಾವಿ ಜಿಲ್ಲಾ ಕಛೇರಿಯ ಸಹಾಯವಾಣಿ ಸಂಖ್ಯೆ: ೦೮೩೧-೨೪೦೨೧೬೩ ಬೆಳಿಗ್ಗೆ ೧೦ ರಿಂದ ಸಂಜೆ ೫:೩೦ ರವರೆಗೆ ಸಂಪರ್ಕಿಸಬಹುದು. ಸುವಿಧಾ ತಂತ್ರಾಂಶದ ಮೂಲಕ ಅರ್ಜಿಗಳನ್ನು ಆಗಷ್ಟ ೨೦ ರ ಸಂಜೆ ೫ ಗಂಟೆಯ ಒಳಗೆ ಸಲ್ಲಿಸಬೇಕು. ನಂತರ ಬಂದ ಅರ್ಜಿಗಳನ್ನು ಸ್ವೀಕರಿಸುವದಿಲ್ಲ ಎಂದು ವಿಶ್ವಕರ್ಮ ಸಮುದಾಯ ಅಭಿವೃದ್ದಿ ನಿಗಮ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮಳೆ ಹಾನಿ: ಮೂಲಸೌಕರ್ಯ ದುರಸ್ತಿಗೆ ಕೂಡಲೇ 500 ಕೋಟಿ ರೂ.ಗಳ ಅನುದಾನ ಬಿಡುಗಡೆ: ಸಿಎಂ ಘೋಷಣೆ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ