Latest

ಸ್ಥಳೀಯ ಸಂಸ್ಥೆಗಳ ಮೀಸಲಾತಿ ಪಟ್ಟಿ ರದ್ದು

ಪ್ರಗತಿವಾಹಿನಿ ಸುದ್ದಿ; ಬೆಂಗಳುರು: ರಾಜ್ಯ ಸರ್ಕಾರ ಹೊರಡಿಸಿದ್ದ ಸ್ಥಳೀಯ ಸಂಸ್ಥೆಗಳ ಮೀಸಲಾತಿ ಪಟ್ಟಿಯನ್ನು ಹೈಕೋರ್ಟ್ ರದ್ದುಗೊಳಿಸಿದೆ.

ನಗರಸಭೆ, ಪುರಸಭೆ, ಪಟ್ಟಣ ಪಂಚಾಯ್ತಿ ಅಧ್ಯಕ್ಷರು, ಉಪಾಧ್ಯಕ್ಷರ ಮೀಸಲಾತಿ ಪಟ್ಟಿಯ ಅಧಿಸೂಚನೆಯನ್ನು ಹೈಕೋರ್ಟ್ ರದ್ದುಪಡಿಸಿದೆ. ಅಲ್ಲದೇ ನಾಲ್ಕು ವಾರಗಳಲ್ಲಿ ನೂತನ ಮೀಸಲಾತಿ ಪಟ್ಟಿ ಪ್ರಕಟಿಸುವಂತೆ ಆದೇಶ ನೀಡಿದೆ.

Home add -Advt

ರಾಜ್ಯ ಸರ್ಕಾರ ಹೊರಡಿಸಿದ್ದ ಮೀಸಲಾತಿ ಅಧಿಸೂಚನೆ ಕುರಿತು ಸಲ್ಲಿಸಲಾಗಿದ್ದ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ನ್ಯಾಯಾಧೀಶ ನ್ಯಾ. ಆರ್ ದೇವದಾಸ್ ಈ ಆದೇಶ ಹೊರಡಿಸಿದ್ದಾರೆ. ಈ ಹಿನ್ನೆಲೆಯಲ್ಲಿ ನಗರಸಭೆ, ಪುರಸಭೆ, ಪಟ್ಟಣ ಪಂಚಾಯ್ತಿಗಳಿಗೆ ಅಧ್ಯಕ್ಷರು, ಉಪಾಧ್ಯಕ್ಷರಾಗಿ ರಾಜ್ಯ ಸರ್ಕಾರದ ಮೀಸಲಾತಿಯಂತೆ ಆಯ್ಕೆಯಾದವರಿಗೆ ಹೈಕೋರ್ಟ್ ಆದೇಶ ಆಘಾತ ನೀಡಿದೆ.

Related Articles

Back to top button