ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಜಿಲ್ಲೆಯ ವಿವಿಧ ತಾಲೂಕುಗಳ ಗ್ರಾಮ ಪಂಚಾಯಿತಿಗಳಲ್ಲಿ ತೆರವಾಗಿರುವ ಒಟ್ಟು 21 ಸ್ಥಾನಗಳ ಉಪ ಚುನಾವಣೆ ಹಿನ್ನೆಲೆ ಮೇ.20ರಂದು ಮತದಾನ ನಡೆಯಲಿದೆ. ಹೀಗಾಗಿ ಶಾಂತಿ, ಸುವ್ಯವಸ್ಥಿತ ಮತದಾನದ ದೃಷ್ಠಿಯಿಂದ ಚುನಾವಣೆ ನಡೆಯುವ ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ಆಯುಧ/ ಶಸ್ತ್ರಾಸ್ತ್ರಗಳನ್ನು ಹೊಂದಿರುವ ಲೈಸೆನ್ಸ್ ದಾರರು ತಕ್ಷಣವೇ ಆಯಾ ವ್ಯಾಪ್ತಿಯಲ್ಲಿರುವ ಪೊಲೀಸ್ ಠಾಣೆಯಲ್ಲಿ ಠೇವಣಿ ಇಡಬೇಕು ಎಂದು ನಿರ್ಗಮಿತ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಅವರು ಆದೇಶಿಸಿದ್ದಾರೆ.
ಸಂಕೇಶ್ವರ ಪುರಸಭೆಯ ವಾರ್ಡ್ ಸಂಖ್ಯೆ 13ರ ಚುನಾವಣೆ ನಡೆಯಲಿರುವ ಹಿನ್ನೆಲೆ ಈ ವಾರ್ಡ್ ವ್ಯಾಪ್ತಿಯಲ್ಲಿ ಆಯುಧಗಳನ್ನು ಹೊಂದಿರುವ ಎಲ್ಲ ಲೈಸೆನ್ಸ್ ದಾರರು ತಮ್ಮ ವ್ಯಾಪ್ತಿಯಲ್ಲಿರುವ ಪೊಲೀಸ್ ಠಾಣೆಗೆ ಶಸ್ತ್ರಾಸ್ತ್ರಗಳನ್ನು ತಕ್ಷಣ ಠೇವಣಿ ಇಡಬೇಕು ಎಂದು ತಿಳಿಸಿದ್ದಾರೆ.
ಚುನಾವಣೆ ಮುಗಿಯುವ ತನಕ ಲೈಸೆನ್ಸ್ದಾರರು ಶಸ್ತ್ರಾಸ್ತ್ರಗಳನ್ನು ಹೊತ್ತು ತಿರುಗಾಡುವಂತಿಲ್ಲ. ಅಲ್ಲದೇ ಎಲ್ಲ ಲೈಸೆನ್ಸ್ ದಾರರು ಹೊಂದಿರುವ ಆಯುಧಗಳನ್ನು ಠೇವಣಿ ಮಾಡಿದ ಬಗ್ಗೆ ಸ್ವೀಕೃತಿ ಪತ್ರ ನೀಡುವುದಕ್ಕೆ ಮತ್ತು ಚುನಾವಣೆ ಪ್ರಕ್ರಿಯೆ ಮುಗಿದ ನಂತರ ಸಂಬಂಧಿಸಿದವರಿಗೆ ಆಯುಧವನ್ನು ವಾಪಸ್ಸು ನೀಡುವುದಕ್ಕೆ ಬೆಳಗಾವಿ ನಗರ ಪೊಲೀಸ್ ಆಯುಕ್ತರು ಹಾಗೂ ಜಿಲ್ಲಾ ಆರಕ್ಷಕ ಅಧೀಕ್ಷಕರರು ಕ್ರಮ ಕೈಗೊಳ್ಳಲಿದ್ದಾರೆ. ನಿಯಮ ಮೀರಿದರೆ ಕಾನೂನು ಕ್ರಮ ಕೈಗೊಳ್ಳಲಾಗುವದು ಎಂದು ತಿಳಿಸಿದ್ದಾರೆ.
ಈ ಆದೇಶವು ಯಾವುದೇ ರಾಷ್ಟ್ರೀಕೃತ ಬ್ಯಾಂಕ್, ಖಾಸಗಿ ಬ್ಯಾಂಕ್ ಅಥವ ಸಂಸ್ಥೆಗಳು ಅದರ ಕಚೇರಿ ಮತ್ತು ಆಸ್ತಿಗಳ ಸಂರಕ್ಷಣೆಗಾಗಿ ಅವುಗಳ ಹೆಸರಿನಲ್ಲಿ ಹೊಂದಿರುವಂತಹ ಆಯುಧ ಅನುಜ್ಞಾ ಪತ್ರದಾರರಿಗೆ ಅನ್ವಯಿಸುವುದಿಲ್ಲ ಎಂದು ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬೆಳಗಾವಿ: ಖಾಸಗಿ ಆಸ್ಪತ್ರೆ ಮೇಲೆ ಆರೋಗ್ಯ ಇಲಾಖೆಯ ಅಧಿಕಾರಿಗಳ ದಾಳಿ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ