Latest

ರಾಜ್ಯದಲ್ಲಿ ಕಾಂಗ್ರೆಸ್ ಪರ ಗಾಳಿ ಎಂದ ಸಿದ್ದರಾಮಯ್ಯ; ಇದು ಜನರ ತೀರ್ಪು ಎಂದ ಡಿ.ಕೆ.ಶಿವಕುಮಾರ್

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಬಿಜೆಪಿ ದುರಾಡಳಿತಕ್ಕೆ ಜನರು ಬೇಸತ್ತಿದದರೆ ಎಂಬುದಕ್ಕೆ ಚುನಾವಣಾ ಫಲಿತಾಂಶವೇ ಸಾಕ್ಷಿಯಾಗಿದೆ. 2023ರಲ್ಲಿಯೂ ಕಾಂಗ್ರೆಸ್ ಗೆಲುವು ಖಚಿತವಾಗಿದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ವಿಶ್ಲೇಷಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದರಾಮಯ್ಯ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಸಿಎಂ ಸ್ವಕ್ಷೇತ್ರ ಶಿಗ್ಗಾವಿಯಲ್ಲಿಯೇ ಬಿಜೆಪಿ ಅಭ್ಯರ್ಥಿ ಸೋತಿದ್ದಾರೆ. ಕಾಂಗ್ರೆಸ್ ಗೆಲುವು ಸಾಧಿಸಿದೆ. ರಾಜ್ಯದ ಬಹುತೇಕ ಕಡೆಗಳಲ್ಲಿ ಕಾಂಗ್ರೆಸ್ ಜಯಗಳಿಸಿದೆ. ಬಿಜೆಪಿ ದುರಾಡಳಿತ, ಭ್ರಷ್ಟಾಚಾರ, ಅಭಿವೃದ್ಧಿ ಶೂನ್ಯ ಆಡಳಿತದಿಂದ ಜನ ಬೇಸತ್ತಿದ್ದು, ಕಾಂಗ್ರೆಸ್ ಪರ ಗಾಳಿ ಬೀಳುತ್ತಿದೆ ಎಂಬುದಕ್ಕೆ ಚುನಾವಣಾ ಫಲಿತಾಂಶ ಸಾಕ್ಷಿಯಾಗಿದೆ ಎಂದಿದ್ದಾರೆ.

Home add -Advt

ಮುಂಬರುವ ವಿಧಾನಸಭಾ ಚುನಾವಣೆಯಲ್ಲಿಯೂ ಕಾಂಗ್ರೆಸ್ ಗೆಲುವು ಸಾಧಿಸಲಿದೆ. ನೂರಕ್ಕೆ ನೂರರಷ್ಟು ಕಾಂಗ್ರೆಸ್ ಗೆಲುವು ನಿಶ್ಚಿತ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಚುನಾವಣಾ ಫಲಿತಾಂಶದ ಬಗ್ಗೆ ಮಾತನಾಡಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಕಾಂಗ್ರೆಸ್ ಗೆಲುವಿನ ಹಿಂದೆ ರಾಜ್ಯದ ಜನಾಭಿಪ್ರಾಯ ಅಡಗಿದೆ. ಆಡಳಿತ ಪಕ್ಷ ಬಿಜೆಪಿಯ ಶಾಸಕರು, ಸಚಿವರಿರುವ ಕಡೆಗಳಲ್ಲೂ ಜನರು ಮಾತ್ರ ಕಾಂಗ್ರೆಸ್ ಪರ ನಿಂತಿದ್ದಾರೆ. ಇದು ರಾಜ್ಯದ ಜನರ ಭಾವನೆ ಯಾವ ರೀತಿ ನಿಮ್ತಿದೆ ಎಂಬುದಕ್ಕೆ ಸಾಕ್ಷಿಯಾಗಿದೆ ಎಂದರು.

ಜನರ ತೀರ್ಪು ನಿರ್ಲಕ್ಷಿಸಿ ಬಿಜೆಪಿ ಸಬೂಬು ಹೇಳಲು ಆಗಲ್ಲ, ಜನ ನಮ್ಮ ಮೇಲೆ ವಿಶ್ವಾಸವಿಡುತ್ತಿದ್ದು, ಜನರ ನಿರೀಕ್ಷೆಗೆ ತಕ್ಕಂತೆ ನಡೆಯಬೇಕಾಗುತ್ತೆ ಎಂದು ಹೇಳಿದರು.
ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಗ್ರಾಮ ಪಂಚಾಯಿತಿ ಸ್ವೀಪ್ ಮಾಡಿದ ಕಾಂಗ್ರೆಸ್

Related Articles

Back to top button