ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯದಲ್ಲಿ ಜೂನ್ 7ರ ಬಳಿಕವೂ ಲಾಕ್ ಡೌನ್ ವಿಸ್ತರಣೆ ಬಹುತೇಕ ಖಚಿತವಾಗಿದೆ. ಕೋವಿಡ್ ತಾಂತ್ರಿಕ ಸಲಹಾ ಸಮಿತಿ ರಾಜ್ಯ ಸರ್ಕಾರಕ್ಕೆ ನೀಡಿರುವ ವರದಿಯಲ್ಲಿ ಇನ್ನೂ ಒಂದುವಾರ ಲಾಕ್ ಡೌನ್ ವಿಸ್ತರಣೆ ಮಾಡುವುದು ಉತ್ತಮ ಎಂದು ಅಭಿಪ್ರಾಯಪಟ್ಟಿದೆ.
ಗ್ರಾಮೀಣ ಪ್ರದೇಶಗಳಲ್ಲಿ ಕೋವಿಡ್ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಹಾಗೂ ಸಾವಿನ ಸಂಖ್ಯೆಯಲ್ಲಿ ಇಳಿಮುಖವಾಗದ ಕಾರಣ ಮುಂಜಾಗೃತಾ ಕ್ರಮವಾಗಿ ಜೂನ್ 13ರವರೆಗೆ ಲಾಕ್ ಡೌನ್ ವಿಸ್ತರಣೆ ಮಾಡಬೇಕು ಎಂದು ಸಲಹಾ ಸಮಿತಿ ತಿಳಿಸಿದೆ ಎನ್ನಲಾಗಿದೆ. ಅಲ್ಲದೇ ತಜ್ಞರ ಸಲಹೆಯಂತೆ ಕೋವಿಡ್ ಸಾಧಕ ಬಾಧಕಗಳ ಬಗ್ಗೆ ಪರಿಶೀಲಿಸಿ ಲಾಕ್ ಡೌನ್ ವಿಸ್ತರಿಸಬೇಕಾದ ಅಗತ್ಯವಿದೆ ಎಂದು ಆರೋಗ್ಯ ಸಚಿವ ಡಾ.ಸುಧಾಕರ್ ಕೂಡ ಸಿಎಂ ಯಡಿಯೂರಪ್ಪನವರಿಗೆ ಒತ್ತಾಯಿಸಿದ್ದಾರೆ. ತಾಂತ್ರಿಕ ಸಲಹಾ ಸಮಿತಿ ವರದಿ, ಕೋವಿಡ್ ಉಸ್ತುವಾರಿ ಮೂವರು ಸಚಿವರ ಸಲಹೆ ಕೂಡ ಲಾಕ್ ಡೌನ್ ವಿಸ್ತರಣೆ ಅಗತ್ಯ ಎಂಬುದಾಗಿದೆ.
ಈ ನಡುವೆ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಯಡಿಯೂರಪ್ಪ ಜೂನ್ 7ರವರೆಗೆ ಈಗಿರುವ ಲಾಕ್ ಡೌನ್ ನಲ್ಲಿ ಯಾವುದೇ ವ್ಯತ್ಯಾಸವಿಲ್ಲ. ಅಲ್ಲಿಯವರೆಗೆ ಕೋವಿಡ್ ಪರಿಸ್ಥಿತಿ ನೋಡಿಕೊಂಡು ಮತ್ತೊಮ್ಮೆ ಸಭೆ ನಡೆಸಿ, ಜೂನ್ 4 -5ರ ಬಳಿಕ ಲಾಕ್ ಡೌನ್ ವಿಸ್ತರಣೆ ಬಗ್ಗೆ ನಿರ್ಧರಿಸುತ್ತೇವೆ ಎಂದು ತಿಳಿಸಿದ್ದಾರೆ.
ಕೋವಿಡ್ ನಿಂದ ಗುಣಮುಖರಾದವರು ಶಸ್ತ್ರಚಿಕಿತ್ಸೆ ಮಾಡಿಸಿಕೊಳ್ಳಬಹುದೇ? ಇಲ್ಲಿದೆ ಮಾಹಿತಿ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ