ಬೆಳಗಾವಿ ಜಿಲ್ಲೆಯಲ್ಲಿ ಲಾಕ್ ಡೌನ್ ವಿಸ್ತರಣೆ ಅಗತ್ಯ ; ಉಸ್ತುವಾರಿ ಸಚಿವರ ಹೇಳಿಕೆ
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – ಬೆಳಗಾವಿ ಜಿಲ್ಲೆಯಲ್ಲಿ ಜೂನ್ 14ಕ್ಕೆ ಲಾಕ್ ಡೌನ್ ಮುಗಿಯುವ ಸಾಧ್ಯತೆ ಇಲ್ಲ. ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ಈ ಕುರಿತು ನೀಡಿರುವ ಹೇಳಿಕೆ ಲಾಕ್ ಡೌನ್ ವಿಸ್ತರಿಸುವ ಸ್ಪಷ್ಟ ಸೂಚನೆ ನೀಡಿದೆ.
ಬೆಳಗಾವಿ ಗಡಿ ಜಿಲ್ಲೆ ಆಗಿರುವುದರಿಂದ ಲಾಕಡೌನ್ ವಿಸ್ತರಿಸುವ ಅಗತ್ಯವಿದೆ ಎನಿಸಿದೆ. ನಾಳೆ ನಡೆಯಲಿರುವ ಸಭೆಯಲ್ಲಿ ಈ ವಿಷಯವನ್ನು ಮುಖ್ಯಮಂತ್ರಿಗಳ ಗಮನಕ್ಕೆ ತರಲಾಗುವುದು ಎಂದು ಗೋವಿಂದ ಕಾರಜೋಳ ತಿಳಿಸಿದ್ದಾರೆ.
ನಿರ್ಣಯ ತೆಗೆದುಕೊಳ್ಳುವಾಗ ಜಿಲ್ಲಾ ಉಸ್ತುವಾರಿ ಸಚಿವರ ಹೇಳಿಕೆಯನ್ನು ಮುಖ್ಯಮಂತ್ರಿಗಳು ಸಾಮಾನ್ಯವಾಗಿ ಪರಿಗಣಿಸುವುದರಿಂದ ಬೆಳಗಾವಿ ಜಿಲ್ಲೆಯಲ್ಲಿ ಇನ್ನೂ ಒಂದು ಅಥವಾ ಎರಡು ವಾರಗಳ ಕಾಲ ಲಾಕ್ ಡೌನ್ ವಿಸ್ತರಣೆ ನಿಶ್ಚಿತವಾಗಿದೆ.
ಜಿಲ್ಲೆಯಲ್ಲಿ ಕೊರೋನಾ ಸಂಪೂರ್ಣ ನಿಯಂತ್ರಣಕ್ಕೆ ಬರುವವರೆಗೂ ಲಾಕ್ ಡೌನ್ ವಿಸ್ತರಿಸುವ ಇಂಗಿತವನ್ನು ಗೋವಿಂದ ಕಾರಜೋಳ ವ್ಯಕ್ತಪಡಿಸಿದ್ದಾರೆ. ಜೊತೆಗೆ ಪಕ್ಕದ ಮಹಾರಾಷ್ಟ್ರದಲ್ಲಿ ಸೋಂಕು ಹೆಚ್ಚಾಗಿರುವುದರಿಂದ ಗಡಿ ಜಿಲ್ಲೆಯಲ್ಲಿ ಲಾಕ್ ಡೌನ್ ಮುಂದುವರಿಕೆ ಅನಿವಾರ್ಯ ಎನ್ನುವುದು ಅವರ ಹೇಳಿಕೆ.
ಅನ್ ಲಾಕ್ : ಜಿಲ್ಲಾಧಿಕಾರಿಗಳ ಜೊತೆ ಸಿಎಂ ಯಡಿಯೂರಪ್ಪ ಚರ್ಚೆ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ