ರಾಜ್ಯದಲ್ಲಿ ಲಾಕ್ ಡೌನ್ ಇನ್ನೂ 14 ದಿನ ವಿಸ್ತರಣೆ – ಸಿಎಂ ಘೋಷಣೆ (ವಿಡಿಯೋ ಸಹಿತ ವರದಿ)

 

Home add -Advt

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು – ರಾಜ್ಯದಲ್ಲಿ ಜೂನ್ 7ರ ವರೆಗೆ ಲಾಕ್ ಡೌನ್ ವಿಸ್ತರಿಸಲಾಗಿದೆ.

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಿರಿಯ ಸಚಿವರ ಸಭೆಯ ನಂತರ ಈ ವಿಷಯ ತಿಳಿಸಿದ್ದಾರೆ.

ಹಳ್ಳಿಗಳಿಗೆ ಹರಡಿರುವುದರಿಂದ ಮತ್ತು ಸಾವಿನ ಸಂಖ್ಯೆ ಹೆಚ್ಚುತ್ತಿರುವುದರಿಂದ ಕಠಿಣ ನಿರ್ಧಾರ ಅನಿವಾರ್ಯ ಎಂದು ಅವರು ತಿಳಿಸಿದ್ದಾರೆ. ಮೇ 24ರಿಂದ ಇನ್ನೂ 14 ದಿನ ಲಾಕ್ ಡೌನ್ ಮುಂದುವರಿಯಲಿದೆ ಎಂದು ಅವರು ತಿಳಿಸಿದ್ದಾರೆ.

ಈಗಿನ ಮಾರ್ಗಸೂಚಿಯಲ್ಲಿ ಯಾವುದೇ ಬದಲಾವಣೆ ಇಲ್ಲ. ಇದೇ ಮುಂದುವರಿಯಲಿದೆ. ಪ್ರತಿ ದಿನಬೆಳಗ್ಗೆ 6ರಿಂದ 10 ಗಂಟೆಯವರೆಗೆ ಮಾತ್ರ ಅಗತ್ಯ ವಸ್ತು ಖರೀದಿಗೆ ಅವಕಾಶವಿರಲಿದೆ. 10 ಗಂಟೆಗೆ ಪ್ರತಿಯೊಬ್ಬರೂ ಮನೆ ಸೇರಬೇಕು. ನಂತರ ವಾಹನಗಳನ್ನು ಸೀಜ್ ಮಾಡಲಾಗುತ್ತದೆ.

ರಾಜ್ಯಾದ್ಯಂತ 14 ದಿನ ಲಾಕ್ ಡೌನ್ ವಿಸ್ತರಣೆ

 

Related Articles

Back to top button