ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯದಲ್ಲಿ ಒಂದೂವರೆ ತಿಂಗಳ ನಂತರ ಕರ್ನಾಟಕ ಲಾಕ್‍ಡೌನ್‍ನಿಂದ ಸಡಿಲಿಕೆ ಆಗಿದೆ. ಆದರೆ ಲಾಕ್‍ಡೌನ್ ಸಡಿಲಿಕೆ ಮೊದಲ ದಿನವೇ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ವ್ಯಕ್ತಿಯೊಬ್ಬ ಮೃತಪಟ್ಟ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಬೆಂಗಳೂರಿನ ಮೆಜೆಸ್ಟಿಕ್ ಬಸ್ ನಿಲ್ದಾಣದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ 45 ವರ್ಷದ ವ್ಯಕ್ತಿ ಮೃತಪಟ್ಟಿದ್ದಾರೆ. ಫ್ಲಾಟ್ ಫಾರಂ ನಂಬರ್ 15ರಲ್ಲಿ ಈ ಅಪಘಾತ ಸಂಭವಿಸಿದ್ದು, ಕೊಪ್ಪಳ ಘಟಕ ಬಸ್‍ನಿಂದ ಅಪಘಾತವಾಗಿದೆ.
ಲಾಕ್‍ಡೌನ್ ಸಡಿಲಿಕೆಯಾದ ಪರಿಣಾಮ ಸಾವಿರಾರು ಜನರು ಮೆಜೆಸ್ಟಿಕ್ ಬಸ್ ನಿಲ್ದಾಣದಲ್ಲಿ ಜಮಾಯಿಸಿದ್ದಾರೆ. ಹೀಗಾಗಿ ಜನಸಂಖ್ಯೆ ಜಾಸ್ತಿ ಆದ ಪರಿಣಾಮ ಬಸ್ ನಿಲ್ದಾಣದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಹೊರಡುತ್ತಿದ್ದ ಸಂದರ್ಭದಲ್ಲಿ ವ್ಯಕ್ತಿಗೆ ಬಸ್ ಡಿಕ್ಕಿ ಹೊಡೆದಿದೆ ಎಂದು ತಿಳಿದುಬಂದಿದೆ. ಅಪಘಾತವಾಗುತ್ತಿದ್ದಂತೆ ಚಾಲಕ ಬಸ್ ಬಿಟ್ಟು ಪರಾರಿಯಾಗಿದ್ದಾನೆ.
ಡಿಕ್ಕಿಯ ರಭಸಕ್ಕೆ ವ್ಯಕ್ತಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಇನ್ನೂ ಅಪಘಾತದ ಮಾಹಿತಿ ತಿಳಿದು ಸ್ಥಳಕ್ಕೆ ಪೊಲೀಸರು ಆಗಮಿಸಿದ್ದು, ಪರಿಶೀಲನೆ ನಡೆಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ