Karnataka News

*ಇಬ್ಬರು ಪೊಲೀಸರು ಸಸ್ಪೆಂಡ್*

ಲಾಕಪ್ ಡೆತ್ ಕೇಸ್

Home add -Advt

ಪ್ರಗತಿವಾಹಿನಿ ಸುದ್ದಿ; ಕೆಲ ದಿನಗಳ ಹಿಂದೆ ಬ್ರಹ್ಮಾವರ ಠಾಣೆಯಲ್ಲಿ ನಡೆದಿದ್ದ ಲಾಕಪ್ ಡೆತ್ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಪೊಲೀಸರನ್ನು ಅಮಾನತುಗೊಳಿಸಲಾಗಿದೆ.

ಉಡುಪಿ ಜಿಲ್ಲೆಯ ಬ್ರಹ್ಮಾವರ ಠಾಣೆಯ ಸಬ್ ಇನ್ಸ್ ಪೆಕ್ಟರ್ ಮಧು ಹಾಗೂ ಕಾನ್ಸ್ ಟೇಬಲ್ ಸುಜಾತಾ ಅಮಾನತುಗೊಂಡವರು. ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಕಸ್ಟಡಿಯಲ್ಲಿದ್ದ ಆರೋಪಿ ಬಿಜು ಮೋಹನ್ ಎಂಬಾತ ಸಾವನ್ನಪ್ಪಿದ್ದ. ಈ ಹಿನ್ನೆಲೆಯಲ್ಲಿ ಆರೋಪಿಯನ್ನು ಬಂಧಿಸುವಾಗ ಸುಪ್ರೀಂ ಕೋರ್ಟ್ ನಿರ್ದೇಶನ ಸರಿಯಾಗಿ ಪಾಲಿಸಿಲ್ಲ. ಬಂಧನದ ವೇಳೆ ಸೂಕ್ತ ಕ್ರಮ ಕೈಗೊಂಡಿಲ್ಲ ಎಂದು ಇಬ್ಬರು ಪೊಲೀಸರನ್ನು ಅಮಾನತುಗೊಳಿಸಿ ಉಡುಪಿ ಎಸ್ ಪಿ ಅರುಣ್ ಕುಮಾರ್ ಆದೇಶ ಹೊರಡಿಸಿದ್ದಾರೆ.

ಮಹಿಳೆಗೆ ಕಿರುಕುಳ ನೀಡಿದ ಆರೋಪದಲ್ಲಿ ಕೇರಳ ಮೂಲದ ಬಿಜು ಮೋಹನ್ ಎಂಬಾತನನ್ನು ಬ್ರಹ್ಮಾವರ ಪೊಲೀಸರು ಬಂಧಿಸಿದ್ದರು. ಆದರೆ ಕಸ್ಟಡಿಯಲ್ಲಿಯೇ ಆತ ಸಾವನ್ನಪ್ಪಿದ್ದ.

Related Articles

Back to top button