ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಕೊರೊನಾ ಹೆಚ್ಚಳ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಮತ್ತೆ ಲಾಕ್ ಡೌನ್ ಜಾರಿ ಆತಂಕ ಮನೆ ಮಾಡಿದ್ದು, ಈ ಬಗ್ಗೆ ಸ್ವತ: ಸಿಎಂ ಯಡಿಯೂರಪ್ಪ ಮತ್ತೆ ಸ್ಪಷ್ಟನೆ ನೀಡಿದ್ದು, ಲಾಕ್ ಡೌನ್ ಜಾರಿ ಪ್ರಸ್ತಾಪವಿಲ್ಲ. ಕರ್ಫ್ಯೂ ವಿಸ್ತರಣೆ ಮಡಲಾಗುವುದು ಎಂದಿದ್ದಾರೆ.
ವಿಧಾನಸೌಧದಲ್ಲಿ ಮಾತನಾಡಿದ ಸಿಎಂ ಯಡಿಯೂರಪ್ಪ, ಲಾಕ್ ಡೌನ್ ಜಾರಿ ಪ್ರಸ್ತಾಪವಿಲ್ಲ. ಆದರೆ ಕೋವಿಡ್ ನಿಯಂತ್ರಣಕ್ಕೆ ಕಠಿಣ ಕ್ರಮಗಳನ್ನು ಕೈಗೊಳ್ಳಲಾಗುವುದು. ಈ ಬಗ್ಗೆ ಏಪ್ರಿಲ್ 18ರಂದು ಸರ್ವಪಕ್ಷ ಸಭೆ ಕರೆಯಲಾಗಿದ್ದು, ಕೋವಿಡ್ ತಾಂತ್ರಿಕ ಸಲಹಾ ಸಮಿತಿಯ ವರದಿ ಬಗ್ಗೆ ಚರ್ಚಿಸಿ ನಿರ್ಧಾರ ಕೈಗೊಳ್ಳಲಾಗುವುದು ಎಂದರು.
ಈಗಿರುವ 8 ಜಿಲ್ಲೆಗಳ ಕೊರೊನಾ ಕರ್ಫ್ಯೂವನ್ನು ಸೋಂಕು ಹೆಚ್ಚುತ್ತಿರುವ ಇನ್ನೂ ಕೆಲ ಜಿಲ್ಲೆಗಳಿಗೆ ವಿಸ್ತರಿಸುವ ಬಗ್ಗೆ ಚಿಂತನೆ ನಡೆದಿದೆ ಎಂದರು. ಈ ಹಿನ್ನೆಲೆಯಲ್ಲಿ ನೈಟ್ ಕರ್ಫ್ಯೂ ಏಫ್ರಿಲ್ 22ರವರೆಗೆ ವಿಸ್ತರಣೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ.
ಲಾಕ್ ಡೌನ್ ಬಗ್ಗೆ ಗೃಹ ಸಚಿವರಿಂದ ಸ್ಪಷ್ಟನೆ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ