
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯದಲ್ಲಿ 11 ಜಿಲ್ಲೆಗಳಲ್ಲಿ ಜೂನ್ 21ರವರೆಗೂ ಲಾಕ್ ಡೌನ್ ವಿಸ್ತರಣೆ ಮಾಡಿರುವುದಾಗಿ ಘೋಷಿಸಿರುವ ಸಿಎಂ ಬಿ.ಎಸ್.ಯಡಿಯೂರಪ್ಪ, ಉಳಿದ ಜಿಲ್ಲೆಗಳಲ್ಲಿ ಲಾಕ್ ಡೌನ್ ಸಡಿಲಿಕೆ ಮಾಡುತ್ತಿರುವುದಾಗಿ ತಿಳಿಸಿದ್ದಾರೆ.
ಅದರಂತೆ ರಾಜಧಾನಿ ಬೆಂಗಳೂರಿನಲ್ಲಿ ಸೋಮವಾರ ಬೆಳಿಗ್ಗೆಯಿಂದಲೇ ಅನ್ ಲಾಕ್ ಆರಂಭವಾಗಲಿದ್ದು, ಅನ್ ಲಾಕ್ ಆದರೂ ಬೆಂಗಳೂರಿಗೆ ಫುಲ್ ರಿಲೀಫ್ ಇರುವುದಿಲ್ಲ. 11 ಜಿಲ್ಲೆ ಹೊರತುಪಡಿಸಿ ಬೆಂಗಳೂರು ಸೇರಿದಂತೆ ಉಳಿದ ಜಿಲ್ಲೆಗಳಲ್ಲಿ ಜೂನ್ 14ರಿಂದ ಸಂಜೆ 7 ಗಂಟೆಯಿಂದ ನೈಟ್ ಕರ್ಫ್ಯೂ ಜಾರಿಯಾಗಲಿದ್ದು, ಜೊತೆಗೆ ವೀಕೆಂಡ್ ಕರ್ಫ್ಯೂ ಕೂಡ ಆರಂಭವಾಗಲಿದೆ. ಶುಕ್ರವಾರ ಸಂಜೆ 7 ರಿಂದ ಸೋಮವಾರ ಬೆಳಿಗ್ಗೆ 5 ಗಂಟೆ ರವರೆಗೆ ವೀಕೆಂಡ್ ಕರ್ಫ್ಯೂ ಜಾರಿಯಲ್ಲಿರಲಿದೆ.
ನೈಟ್ ಹಾಗೂ ವಿಕೆಂಡ್ ಕರ್ಫ್ಯೂ ಸಂದರ್ಭದಲ್ಲಿ ಅನಗತ್ಯವಾಗಿ ಯಾರೂ ಕೂಡ ಮನೆಯಿಂದ ಹೊರಬರುವಂತಿಲ್ಲ. ಹೊಸ ಮಾರ್ಗಸೂಚಿಯ ಪ್ರಮುಖ ಅಂಶಗಳು ಹೀಗಿವೆ
ಎಲ್ಲಾ ಕಾರ್ಖಾನೆಗಳಲ್ಲಿ ಶೇ.50ರಷ್ಟು ಸಿಬ್ಬಂದಿ ಬಳಕೆಗೆ ಅವಕಾಶ
ಗಾರ್ಮೆಂಟ್ಸ್ ಗಳಲ್ಲಿ ಶೇ.30ರಷ್ಟು ಸಿಬ್ಬಮ್ದಿಗಳಿಗೆ ಅವಕಾಶ.
ಮಧ್ಯಾಹ್ನ 2 ಗಂಟೆ ವರೆಗೆ ಬೀದಿ ಬದಿ ವ್ಯಾಪಾರಕ್ಕೆ ಅವಕಾಶ
ಹೋಟೆಲ್ ಗಳಲ್ಲಿ ಪಾರ್ಸೆಲ್ ಗಳಿಗೆ ಮಾತ್ರ ಅವಕಾಶ
ಮದ್ಯ ಪಾರ್ಸೆಲ್ ಪಡೆಯಲು ಬೆಳಿಗ್ಗೆ 6ರಿಂದ ಮಧ್ಯಾಹ್ನ 2 ಗಂಟೆವರೆಗೆ ಅವಕಾಶ
ಬೆಳಿಗ್ಗೆ 10ಗಂಟೆವರೆಗೆ ಪಾರ್ಕ್ ಗಳು ಓಪನ್
ಕಟ್ಟಡ ಕಾಮಗಾರಿಗಳಿಗೆ ಅವಕಾಶ
ಸಿಮೆಂಟ್, ಸ್ಟೀಲ್ ಅಂಗಡಿ ತೆರೆಯಲು ಅವಕಾಶ
ರಾಜ್ಯಾದ್ಯಂತ ಕೆ ಎಸ್ ಆರ್ ಟಿಸಿ ಬಸ್ ಸಂಚಾರಕ್ಕೆ ನಿರ್ಬಂಧ.
ಬೆಂಗಳೂರಿನಲ್ಲಿ ಬಿಎಂಟಿಸಿ, ಮೆಟ್ರೋ ಸಂಚಾರವಿಲ್ಲ
ಆಟೋ, ಟ್ಯಾಕ್ಸಿ, ಸಂಚಾರಕ್ಕೆ ಅವಕಾಶ ನೀಡಲಾಗಿದ್ದು, ಆದರೆ ಇಬ್ಬರು ಮಾತ್ರ ಪ್ರಯಾಣಿಸಬಹುದು
ಅಂತರ್ ಜಿಲ್ಲಾ ಪ್ರವಾಸಕ್ಕೆ ಅಡ್ದಿಯಿಲ್ಲ.
ಮಂಡ್ಯ, ಮೈಸೂರು, ಬೆಳಗಾವಿ, ಚಿಕ್ಕಮಗಳೂರು, ಹಾಸನ, ಶಿವಮೊಗ್ಗ, ಕೊಡಗು, ದಕ್ಷಿಣ ಕನ್ನಡ, ದಾವಣಗೆರೆ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಜೂನ್ 14ರಿಂದ ಜೂನ್ 21ರವರೆಗೆ ಲಾಕ್ ಡೌನ್ ವಿಸ್ತರಣೆ ಮಾಡಲಾಗಿದೆ.
ಬೆಳಗಾವಿ ಸೇರಿ 11 ಜಿಲ್ಲೆಗಳಲ್ಲಿ ಇನ್ನಷ್ಟು ಕಠಿಣ ಲಾಕ್ ಡೌನ್; ಉಳಿದೆಡೆ ಸಡಿಲಿಕೆ
ಗೆಸ್ಟ್ ಹೌಸ್ ದಾಂದಲೆ; ಜಮೀರ್ ವಿರುದ್ಧ ನಿಖಿಲ್ ಆಕ್ರೋಶ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ