
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಕೊರೊನಾ ಎರಡನೇ ಅಲೆ ನಿಯಂತ್ರಣಕ್ಕೆ ರಾಜ್ಯದಲ್ಲಿ ಪ್ರಸ್ತುತ ಜಾರಿಯಲ್ಲಿರುವ ಲಾಕ್ ಡೌನ್ ಮತ್ತೆ ಒಂದು ವಾರಕಾಲ ವಿಸ್ತರಣೆಯಾಗುವುದು ಬಹುತೇಕ ಖಚಿತವಾಗಿದೆ.
ಈ ಬಗ್ಗೆ ಸಿಎಂ ಯಡಿಯೂರಪ್ಪ ಸುಳಿವು ನೀಡಿದ್ದು, ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಕೊರೊನಾ ಕಂಪ್ಲೀಟ್ ನಿಯಂತ್ರಣಕ್ಕೆ ಬಂದಿಲ್ಲ. ಈ ನಿಟ್ಟಿನಲ್ಲಿ ಲಾಕ್ ಡೌನ್ ವಿಸ್ತರಣೆ, ಸಡಿಲ ಮಾಡುವ ಬಗ್ಗೆ ಹಿರಿಯ ಅಧಿಕಾರಿಗಳ ಜೊತೆ ಚರ್ಚಿಸಿ ಯಾವ ರೀತಿ ಬಿಗಿ ಕ್ರಮಕೈಗೊಳ್ಳಬೇಕು ಎಂದು ಸಂಜೆ ಅಥವಾ ನಾಳೆ ನಿರ್ಧರಿಸುತ್ತೇವೆ ಎಂದರು.
ಇನ್ನು ರಫ್ತು ಉದ್ಯಮಕ್ಕೆ ಗುರುವಾರದಿಂದ ಅನುಮತಿ ನೀಡಲಾಗುವುದು. ಮತ್ತಷ್ಟು ಕ್ಷೇತ್ರಗಳಿಗೆ ವಿನಾಯಿತಿ ನೀಡುವ ಬಗ್ಗೆ ಹಾಗೂ ಎರಡನೇ ಪ್ಯಾಕೇಜ್ ಬಗ್ಗೆಯೂ ಎರಡು ದಿನಗಳಲ್ಲಿ ಘೋಷಿಸಲಾಗುವುದು ಎಂದು ತಿಳಿಸಿದರು.
ದಾಂಡೇಲಿಯಲ್ಲಿ ಭಾರಿ ಪ್ರಮಾಣದ ಖೋಟಾ ನೋಟು ವಶ; ಬೆಳಗಾವಿಯ ವ್ಯಕ್ತಿ ಸೇರಿ 6 ಜನರ ಬಂಧನ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ