ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯದಲ್ಲಿ ಲಾಕ್ ಡೌನ್ ವಿಸ್ತರಣೆ ಬಹುತೇಕ ಖಚಿತವಾಗಿದ್ದು, ಮೇ 24ರ ಬಳಿಕ ಕರ್ನಾಟಕದಲ್ಲಿ ಕಠಿಣ ಲಾಕ್ ಡೌನ್ ಜಾರಿಗೆ ಬರಲಿದೆ ಎಂದು ತಿಳಿದುಬಂದಿದೆ.
ರಾಜ್ಯದ ಭವಿಷ್ಯದ ಹಿತ ದೃಷ್ಟಿಯಿಂದ ಮುಂದಿನ 15 ದಿನಗಳ ಕಾಲ ರಾಜ್ಯದಲ್ಲಿ ಲಾಕ್ ಡೌನ್ ಜಾರಿ ಮಾಡಬೇಕು ಎಂದು ವಿಪತ್ತು ನಿರ್ವಹಣಾ ಅಧಿಕಾರಿಗಳ ತಂಡ ರಾಜ್ಯ ಸರ್ಕಾರವನ್ನು ಒತ್ತಾಯಿಸಿದೆ.
ಮುಖ್ಯಕಾರ್ಯದರ್ಶಿ ರವಿಕುಮಾರ್ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ರಾಜ್ಯದಲ್ಲಿನ ಕೊರೊನಾ ಸ್ಥಿತಿಗತಿ, ಲಾಕ್ ಡೌನ್ ವಿಸ್ತರಣೆ ಕುರಿತು ಸುದೀರ್ಘ ಚರ್ಚೆ ನಡೆಸಲಾಗಿದ್ದು, ವಿಪತ್ತು ನಿರ್ವಹಣಾ ಅಧಿಕಾರಿಗಳು ಮುಂದಿನ 2 ವಾರಗಳ ಕಾಲ ರಾಜ್ಯದಲ್ಲಿ ಲಾಕ್ ಡೌನ್ ವಿಸ್ತರಿಸುವುದು ಒಳಿತು ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಸಿಎಂ ಜೊತೆ ಚರ್ಚಿಸಿವುದಾಗಿ ಮುಖ್ಯಕಾರ್ಯದರ್ಶಿ ಹೇಳಿದ್ದಾರೆ ಎನ್ನಲಾಗಿದೆ.
ಈ ನಡುವೆ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಯಡಿಯೂರಪ್ಪ ಲಾಕ್ ಡೌನ್ ವಿಸ್ತರಣೆ ಬಗ್ಗೆ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗುವುದು. ಇಂದು ಸಂಜೆ ವೇಳೆಗೆ ಸಂಪೂರ್ಣ ಮಾಹಿತಿ ಸಗಲಿದ್ದು, ನಾಳೆ ನಡೆಯಲಿರುವ ಸಭೆಯಲ್ಲಿ ಮತ್ತೊಮ್ಮೆ ಚರ್ಚಿಸಿ ನಿರ್ಧರಿಸುವುದಾಗಿ ಹೇಳಿದ್ದಾರೆ.
13 ನಕ್ಸಲರಲು ಎನ್ ಕೌಂಟರ್ ಗೆ ಬಲಿ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ